ಅಭಿವ್ಯಕ್ತಿ ಸ್ವಾತಂತ್ರ್ಯ ನೆಪದ ದೇಶವಿರೋಧಿ ಚಟುವಟಿಕೆ ಸಲ್ಲ

By: ಒನ್ ಇಂಡಿಯಾ ಪ್ರತಿನಿಧಿ
Subscribe to Oneindia Kannada

ಮಂಗಳೂರು, ಆಗಸ್ಟ್, 21: ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ವಿಧ್ವಂಸಕ ಕೃತ್ಯಗಳು ದೇಶದಲ್ಲಿ ಹೆಚ್ಚಾಗುತ್ತಿವೆ. ಹೋರಾಟಗಳಿಗೆ ಸ್ಷಷ್ಟ ಅರ್ಥ ಇರಬೇಕು. 10 ವರ್ಷಗಳ ಹಿಂದೆ ಇದ್ದ ದೇಶವನ್ನು ನೋಡುವ ದೃಷ್ಟಿಕೋನ ಬದಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದರು.

ಭಾನುವಾರ ಮಂಗಳೂರಿನಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ತಿರಂಗಾ ಯಾತ್ರೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಅಮಿತ್ ಶಾ, ದೇಶ ವಿರೋಧಿ ಚಟುವಟಿಕೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.

bjp

ಕಾರ್ಯಕ್ರಮ ಆರಂಭಕ್ಕೂ ಮುನ್ನ ಬಿಜೆಪಿಯ ತಿರಂಗಾ ಯಾತ್ರೆ ನಗರದ ವಿವಿಧ ರಸ್ತೆಗಳಲ್ಲಿ ಸಂಚರಿಸಿತು. ಅಮಿತ್ ಶಾ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಸಂಸದ ನಳೀನ್ ಕುಮಾರ್ ಕಟೀಲ್ ಸಾಥ್ ನೀಡಿದರು.

ಭಾನುವಾರ ಬೆಳಿಗ್ಗೆ ಮಂಗಳೂರಿಗೆ ಆಗಮಿಸಿದ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರನ್ನು ಬಿ.ಎಸ್. ಯಡಿಯೂರಪ್ಪನವರಿಗೆ ರಾಖಿ ಕಟ್ಟುವ ಮುಖಾಂತರ ಬರಮಾಡಿಕೊಂಡರು. ಇದಾದ ಮೇಲೆ ರಾಣಿ ಅಬ್ಬಕ್ಕ ದೇವಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ತಿರಂಗಾ ಯಾತ್ರೆಗೆ ಚಾಲನೆ ನೀಡಲಾಯಿತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
BJP national president Amit Shah inaugurated the BJP's Tiranga yatra at Mangaluru on August 21, 2016 Karnataka state BJP President B. S. Yeddyurappa, Union Minister Sadananda Gowda, MP Nalin Kumar Katil participated.
Please Wait while comments are loading...