ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರಿನಲ್ಲಿ ಮತ್ತೊಂದು ಹೈಟೆಕ್ ವೇಶ್ಯಾವಾಟಿಕೆ ಜಾಲ ಭೇದಿಸಿದ ಪೊಲೀಸರು

|
Google Oneindia Kannada News

ಮಂಗಳೂರು, ಜೂನ್ 22: ನಗರದಲ್ಲಿ ವೆಬ್ ಸೈಟ್ ಮೂಲಕ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಬೃಹತ್ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದ್ದು ಇಬ್ಬರು ಯುವತಿಯರನ್ನು ರಕ್ಷಿಸಲಾಗಿದೆ.

ನಗರದಲ್ಲಿ mangalore.locanto.net ಎಂಬ ವೆಬ್ ಸೈಟ್ ಮೂಲಕ ವೇಶ್ಯಾವಾಟಿಕೆ ವ್ಯವಹಾರ ನಡೆಯುತ್ತಿರುವ ಬಗ್ಗೆ ಮಂಗಳೂರಿನ ಸಿಸಿಬಿ ಪೊಲೀಸರಿಗೆ ಖಚಿತ ಮಾಹಿತಿ ದೊರೆತಿತ್ತು. ಈ ಹಿನ್ನೆಲೆಯಲ್ಲಿ ನಗರದ ಬಿಜೈ ಕಾಪಿಕಾಡ್ ರಸ್ತೆಯ ಕೊಟ್ಟಾರ ಕ್ರಾಸ್ ಬಳಿಯ ಆಪಾರ್ಟ್ ಮೆಂಟ್ ನ ಫ್ಲಾಟ್ ವೊಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು.

Another Hi-tech Prostitution racket busted in Mangaluru

ದಾಳಿಯ ಸಂದರ್ಭ ಫ್ಲಾಟ್ ನಲ್ಲಿ ವೇಶ್ಯಾವಾಟಿಕೆ ವ್ಯವಹಾರ ನಡೆಸುತ್ತಿದ್ದ ಆರೋಪದ ಮೇಲೆ ಉಡುಪಿಯ ಜೀವನ್ ಪೂಜಾರಿ (27) ಹಾಗು ಹಾಸನನದ ಚೆನ್ನರಾಯಪಟ್ಟಣ ಮೂಲದ ಕೆ.ಪಿ. ನಾಗರಾಜ್ (27) ಎಂಬವರನ್ನು ಬಂಧಿಸಲಾಗಿದ್ದು ಇಬ್ಬರು ಯುವತಿಯರನ್ನು ಪೊಲೀಸರು ರಕ್ಷಿಸಿದ್ದಾರೆ.

ಬಂಧಿತ ಆರೋಪಿಗಳು ಈ ಹೈಟೆಕ್ ವೇಶ್ಯಾವಾಟಿಕೆ ಧಂಧೆಯನ್ನು ನಡೆಸಲು mangalore.locanto.net ವೆಬ್ ಸೈಟ್ ನಲ್ಲಿತಮ್ಮ ಮೊಬೈಲ್ ನಂಬರ್ ಗಳನ್ನು ನಮೂದಿಸಿ ಕರೆ ಮಾಡುವ ಗ್ರಾಹಕರನ್ನು ಫ್ಲಾಟ್ ಗೆ ಕರೆಯುತ್ತಿದ್ದರು ಎಂದು ಹೇಳಲಾಗಿದೆ. ದಾಳಿ ಸಂದರ್ಭದಲ್ಲಿ ರಕ್ಷಿಸಲಾದ ಇಬ್ಬರು ಯುವತಿಯರನ್ನು ಮಹಿಳಾ ಸ್ವೀಕಾರ ಕೇಂದ್ರಕ್ಕೆ ಹಸ್ತಾಂತರಿಸಲಾಗಿರುತ್ತದೆ.

ಬಂಧಿತ ಆರೋಪಿಗಳಿಂದ 2 ಮೊಬೈಲ್ ಫೋನ್ ಹಾಗೂ 30,220 ಸಾವಿರ ರೂಪಾಯಿ ನಗದು ಮತ್ತು 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಹೈಟೆಕ್ ವೇಶ್ಯಾವಾಟಿಕೆ ಜಾಲದಲ್ಲಿ ಭಾಗಿಯಾಗಿರುವ ಮತ್ತಿಬ್ಬರು ತಲೆಮರೆಸಿಕೊಂಡಿದ್ದು ಅವರ ಬಂಧನಕ್ಕೂ ಪೊಲೀಸರು ಬಲೆ ಬೀಸಿದ್ದಾರೆ.

English summary
Mangaluru CCB police team busted another high tech prostitution racket near Kottara Cross. Connected to this case police arrested 2 accused and 2 girls rescued. Accused identified as Jeevan Poojari and KP Nagraj.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X