ಅನುಪಮಾ ರಾಜೀನಾಮೆ ಅಂಗೀಕರಿಸಬಾರದಿತ್ತು : ತಾಯಿ

By: ಐಸ್ಯಾಕ್ ರಿಚರ್ಡ್, ಮಂಗಳೂರು
Subscribe to Oneindia Kannada

ಪಡುಬಿದ್ರೆ, ಜೂನ್ 12 : "ನನ್ನ ಮಗಳು ಎಲ್ಲಿದ್ದಾಳೆ ಎಂಬುವುದು ತಿಳಿದಿಲ್ಲ. ಅವಳನ್ನು ಮೊಬೈಲ್ ಮೂಲಕ ಸಂಪರ್ಕಿಸಿದಾಗ ಸದ್ಯಕ್ಕೆ ಊರಿಗೆ ಬರುವುದಿಲ್ಲ. ತನಗಾದ ಅನ್ಯಾಯವನ್ನು ಸರಿಪಡಿಸಿ ಬರುವುದಾಗಿ ಹೇಳಿದ್ದಾಳೆ. ಆ ಬಳಿಕ ನಮ್ಮನ್ನು ಸಂಪರ್ಕಿಸಿಲ್ಲ. ಈಗಲೂ ಅವಳಿಗೆ ಜೀವಬೆದರಿಕೆ ಇದೆ. ಆಕೆಗೆ ರಕ್ಷಣೆ ಬೇಕಾಗಿದೆ. ಈಗ ಒಬ್ಬಂಟಿಯಾಗಿ ಬಹಳ ನೊಂದಿದ್ದಾಳೆ. ಅವಳಿಗೆ ಯಾರ ಸಹಕಾರವೂ ಇಲ್ಲ."

ವ್ಯವಸ್ಥೆಯ ವಿರುದ್ಧ ಸಿಡಿದೆದ್ದಿರುವ ಕೂಡ್ಲಿಗಿಯ ಮಾಜಿ ಡಿವೈಎಸ್‌ಪಿ ಅನುಪಮಾ ಶೆಣೈ ಅವರ ತಾಯಿ ನಳಿನಿ ಶೆಣೈ ಅವರು ಶನಿವಾರ ಸುದ್ದಿಗಾರರೊಂದಿಗೆ ಶನಿವಾರ ಮೇಲಿನಂತೆ ತಮ್ಮ ಅಳಲನ್ನು ತೋಡಿಕೊಂಡರು. ಶನಿವಾರ ಅನುಪಮಾ ಅವರ ರಾಜೀನಾಮೆ ಅಂಗೀಕಾರವಾದ ನಂತರ, ಉಚ್ಚಿಲದಲ್ಲಿರುವ ಮನೆಯಲ್ಲಿ ನಳಿನಿ ಶೆಣೈ ಅವರು ರಾಜೀನಾಮೆ ಅಂಗೀಕರಿಸಬಾರದಿತ್ತು ಅಂತ ಕಣ್ಣೀರಿಟ್ಟರು. [ಅನುಪಮಾ ರಾಜೀನಾಮೆ ಅಂಗೀಕರಿಸಿದ ಸರ್ಕಾರ]

Anupama's resignation should not have been accepted : Mother

ರಾಜಿನಾಮೆ ಅಂಗೀಕಾರ ಸರಿಯಲ್ಲ

"ಆಕೆ ರಾಜಿನಾಮೆ ನೀಡಿರುವ ಬಗ್ಗೆ ಜನರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕಾಗಿತ್ತು. ಒಂದು ಜನನ ಪತ್ರ ಪಡೆದುಕೊಳ್ಳಲು ಆರು ತಿಂಗಳ ಕಾಲ ಸಮಯಾವಕಾಶ ಇರುತ್ತದೆ. ಪಡಿತರ ಚೀಟಿ ಪಡೆದುಕೊಳ್ಳಲು ವಿಳಂಬ ಮಾಡುತ್ತಾರೆ. ಆದರೆ ರಾಜೀನಾಮೆ ನೀಡಿದ್ದಾಳೆ ಎಂದ ಮಾತ್ರಕ್ಕೆ ನಾಲ್ಕೇ ದಿನದಲ್ಲಿ ರಾಜಿನಾಮೆ ಅಂಗೀಕರಿಸಿರುವುದು ಸರಿಯಲ್ಲ. ರಾಜೀನಾಮೆ ಅಂಗೀಕರಿಸಲು 90 ದಿನಗಳ ಕಾಲಾವಕಾಶ ಇದೆ. ಆಕೆಯ ರಾಜೀನಾಮೆಯಿಂದ ನಮಗೆ ದಿಕ್ಕು ತೋಚದಂತಾಗಿದೆ. ಈ ಬಗ್ಗೆ ಸರಕಾರ ಮರುಪರಿಶೀಲನೆ ಮಾಡಬೇಕು" ಎಂದು ಅವರು ಒತ್ತಾಯಿಸಿದ್ದಾರೆ. [ಅನುಪಮಾ ವರ್ಸಸ್ ಪರಮೇಶ್ವರ್ : ಇದುವರೆಗಿನ ಕಥೆಗಳು]

"ಕೂಡ್ಲಿಗಿಯ ಪರಿಸ್ಥಿತಿ ಅನುಪಮಾ ಕೆಲಸ ಮಾಡುವಂತಿರಲಿಲ್ಲ. ಅಪರಿಚಿತ ವ್ಯಕ್ತಿಗಳು ರಾತ್ರಿ ಹೊತ್ತು ಮನೆಯ ಬಾಗಿಲು ಬಡಿದು ಕಿರುಕುಳ ನೀಡುತ್ತಿದ್ದರು. ಮಧ್ಯರಾತ್ರಿ ಹೊತ್ತು ಬೆದರಿಕೆ ಕರೆಗಳು ಬರುತಿದ್ದವು. ಆದರೆ ಆಕೆ ಧೈರ್ಯದಿಂದ ಉತ್ತರ ನೀಡುತ್ತಾ, 'ನಿನ್ನ ಶೌರ್ಯ ತೋರಿಸುವುದು ಬೇಡ. ನಿನ್ನ ಧಮಕಿಗೆ ಹೆದರುವವಳು ನಾನಲ್ಲ' ಎಂದು ಹೇಳಿದ್ದು ಗೊತ್ತಿದೆ. ಅಲ್ಲಿ ಅವಳು ನಿದ್ದೆ ಇಲ್ಲದ ರಾತ್ರಿ ಕಳೆದಿದ್ದುದೂ ನೆನಪಿದೆ. ನಾನು ಆಗಲೇ ಅವಳಿಗೆ ಹೇಳಿದ್ದೆ, ನೀನು ಟ್ರಾನ್ಸ್‌ಫರ್ ಪಡೆದು ಬೇರೆ ಕಡೆಗೆ ಹೋಗಬಹುದಲ್ಲಾ ಎಂದಾಗ, 'ನಾನೇನು ತಪ್ಪು ಮಾಡಿಲ್ಲ. ನಾನ್ಯಾಕೆ ಹೋಗಲಿ' ಎಂದು ನನ್ನನ್ನೇ ಪ್ರಶ್ನಿಸಿದ್ದಳು."ಉಡುಪಿ ಎಸ್ಪಿ ಅಣ್ಣಾಮಲೈ ಅವರು ನನಗೆ ದೂರವಾಣಿ ಕರೆ ಮಾಡಿ, ಒಮ್ಮೆ ಅನುಪಮಾರರನ್ನು ಮಾತನಾಡಿಸುವಂತೆ ಮನವಿ ಮಾಡಿದ್ದರು. ಅಂತೆಯೇ ಅವಳ ರಾಜಿನಾಮೆಯನ್ನು ಹಿಂಪಡೆಯುವಂತೆ ನನ್ನನ್ನು ಒತ್ತಾಯಿಸಿದ್ದರು. ಆದರೆ ಆಕೆ ಅವರೊಂದಿಗೆ ಮಾತನಾಡಿಲ್ಲ. ನಾನು ಅವಳಿಗೆ ಹೇಳುವ ಪರಿಸ್ಥಿತಿಯಲ್ಲಿಲ್ಲ. ಬಳ್ಳಾರಿ ಪೊಲೀಸರೂ ಇಲ್ಲಿಗೆ ಭೇಟಿ ನೀಡಿ ನಮಗೆ ಸಾಂತ್ವನ ಹೇಳಿದ್ದಾರೆ. ಬಳ್ಳಾರಿಯಲ್ಲಿ ಅನುಪಮಾ ಹಾಗೂ ಅಲ್ಲಿಯ ಎಸ್ಪಿಯವರ ಬಗ್ಗೆ ಉತ್ತಮ ಅಭಿಪ್ರಾಯ ಇದೆ. ಆದರೆ ಅಲ್ಲಿಯ ರಾಜಕಾರಣಿಗಳು ಉತ್ತಮ ಕೆಲಸ ಮಾಡಲು ಪೂರಕ ವಾತಾವರಣ ಕಲ್ಪಿಸುತ್ತಿಲ್ಲ ಎಂದರು.[ರೋಚಕ ಕಥೆಗೆ ಎಂಥ ತಿರುವು?! ಅಂದಹಾಗೆ, ಯಾರೀ ಅನುಪಮ?]

ಫೇಸ್ಬುಕ್ ಅಕೆಯದಲ್ಲ

ಫೇಸ್‌ಬುಕ್ ಬಗ್ಗೆ ಪ್ರಶ್ನಿಸಿದಾಗ, ಆಕೆ ಅಂತಹ ಭಾಷೆಯನ್ನು ಎಂದೂ ಬಳಸುತ್ತಿಲ್ಲ. ಆಕೆಯ ಹೆಸರಿನಲ್ಲಿ ಯಾರೋ ಬಳಸುತ್ತಿರಬೇಕು ಎಂದು ನಳಿನಿ ಶೆಣೈ ಉತ್ತರ ನೀಡಿದರು. [ಅನುಪಮಾ ಶೆಣೈ ರಾಜೀನಾಮೆ ವಿವಾದ, ಉತ್ತರಗಳು ಬೇಕಾಗಿವೆ]

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Resigned Kudligi DySP Anupama Shenoy's mother Nalini Shenoy has said that her daughter's resignation letter should not have been accepted by Karnataka govt. The mother says, there is death threat to her daughter. She feels Anupama too should not have resigned.
Please Wait while comments are loading...