ಏಷ್ಯನ್ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್‌ನ ಪದಕ ವಿಜೇತರಿಗೆ ಭವ್ಯ ಸ್ವಾಗತ

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಅಕ್ಟೋಬರ್. 24: ತಾಷ್ಕೆಂಟ್‌ನ ಉಜ್ಬೇಕಿಸ್ತಾನದಲ್ಲಿ ನಡೆದ ಏಷ್ಯನ್ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದ ಸತೀಶ್ ಕುಮಾರ್ ಕುದ್ರೋಳಿ ಮತ್ತು ವಿನ್ಸೆಂಟ್ ಕಾರ್ಲೊ ಅವರನ್ನು ಭಾನುವಾರ ಬೆಳಿಗ್ಗೆ ಮಂಗಳೂರು ರೈಲ್ವೆ ನಿಲ್ದಾಣದಲ್ಲಿ ಭವ್ಯ ಸ್ವಾಗತ ಕೋರಲಾಯಿತು.

ತಾಷ್ಕೆಂಟ್‌ನಲ್ಲಿ ಅ.14ರಿಂದ 20ರವರೆಗೆ ನಡೆದ ಏಷ್ಯನ್ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ ನ ಪವರ್ ಲಿಫ್ಟಿಂಗ್ ವಿಭಾಗದಲ್ಲಿ ಸ್ಪರ್ಧಿಸಿದ್ದ ಸತೀಶ್ ಕುಮಾರ್ ಕುದ್ರೋಳಿ ಅವರು ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ. ಇನ್ನೋರ್ವ ಸ್ಟರ್ಧಿ ಮಂಗಳೂರು ಮೂಲದ ವಿನ್ಸೆಂಟ್ ಕಾರ್ಲೊ ಅವರು ಏಳನೇ ಸ್ಥಾನ ಪಡೆದಿದ್ದಾರೆ.

Managaluru

ಇವರಿಬ್ಬರೂ ಮಂಗಳೂರಿನ ಬಾಲಾಂಜನೇಯ ಜಿಮ್‌ನ ಸದಸ್ಯರಾಗಿದ್ದು, ರಾಜ್ಯ ಅಬಕಾರಿ ಇಲಾಖೆಯಲ್ಲಿ ಉದ್ಯೋಗದಲ್ಲಿದ್ದಾರೆ.

Sathish Kumar

ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬೆಳ್ಳಿ ವಿಜೇತ ಸತೀಶ್ ಕುಮಾರ್ ಕುದ್ರೋಳಿ, "ಭಾರತದ ನಾನಾ ಕಡೆಗಳಿಂದ ಒಟ್ಟು 30 ಮಂದಿ ಭಾಗವಹಿಸಿದ್ದರು. ಕರ್ನಾಟಕದಿಂದ ಒಟ್ಟು ನಾಲ್ಕು ಮಂದಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆವು.

ತಾಷ್ಕೆಂಟ್‌ನ ಮೈನಸ್ ಎರಡು ಡಿಗ್ರಿ ಉಷ್ಣಾಂಶದ ಪರಿಸ್ಥಿತಿಗೆ ಹೊಂದಿಕೊಳ್ಳುವುದು ಕಷ್ಟದಾಯಕವಾಗಿತ್ತು.ಆದರೂ ಆ ವಾತಾವರಣಕ್ಕೆ ಹೊಂದಿಕೊಂಡು 120 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿ ಬೆಳ್ಳಿ ಪದಕ ಗೆದ್ದಿರುವುದಕ್ಕೆ ಖುಷಿಯಿದೆ. ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ" ಎಂದರು.

ಈ ಸಂದರ್ಭದಲ್ಲಿ ಶಾಸಕ ಜೆ.ಆರ್. ಲೋಬೊ ಸೇರಿದಂತೆ ಮತ್ತಿತರರು ಇಬ್ಬರಿಗೂ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Sathish Kumar Silver medal win in the Asian Bench Press Championship, were welcomed with enthusiasm at Mangaluru central railway station here on Sunday, October 23.
Please Wait while comments are loading...