ಕೋಳಿ ಅಂಕ ಅಡ್ಡೆ ಮೇಲೆ ಪೊಲೀಸರ ದಾಳಿ, 39 ಹುಂಜ ವಶ

Posted By:
Subscribe to Oneindia Kannada

ಮಂಗಳೂರು, ನವೆಂಬರ್ 17: ಕೋಳಿ ಅಂಕದ ಅಡ್ಡೆಗೆ ಪೊಲೀಸರು ದಾಳಿ ನಡೆಸಿ 39 ಅಂಕದ ಹುಂಜಗಳನ್ನು ವಶಪಡಿಸಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ ಜೂಜುಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಬಜ್ಪೆಯಲ್ಲಿ ನಡೆದಿದೆ.

Bajpe Police Arrests 6 In Raid On Cockfight At Nerlapadavu

ಮಂಗಳೂರು ಹೊರವಲಯದ ಬಜ್ಪೆ ಸಮೀಪದ ನೆರ್ಲಪದವು ಎಂಬಲ್ಲಿ ಕೋಳಿ ಅಂಕ ನಡೆಯುತ್ತಿದ್ದ ಖಚಿತ ಮಾಹಿತಿ ಮೇರೆಗೆ ಬಜ್ಪೆ ಠಾಣೆಯ ಪೊಲೀಸರು ದಾಳಿ ನಡೆಸಿದರು. ದಾಳಿ ವೇಳೆ ಇಲ್ಲಿನ ನಿರ್ಜನ ಪ್ರದೇಶದಲ್ಲಿ ಕೋಳಿ ಅಂಕ ನಡೆಯುತ್ತಿತ್ತು. ಮತ್ತು ನೂರಾರು ಜನರೂ ಸ್ಥಳದಲ್ಲಿ ಸೇರಿದ್ದರು.

ಪೊಲೀಸರನ್ನು ಕಂಡ ಕೂಡಲೇ ಜನರು ಪರಾರಿಯಾಗಲು ಯತ್ನಿಸಿದ್ದಾರೆ. ಆದರೆ ಕೋಳಿ ಅಂಕ ನಡೆಸುತ್ತಿದ್ದ 6 ಮಂದಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Bajpe Police Arrests 6 In Raid On Cockfight At Nerlapadavu

ದಾಳಿ ಸಂದರ್ಭದಲ್ಲಿ 39 ಅಂಕದ ಹುಂಜಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಕೋಳಿ ಕಾಳಗದ ಸಂರ್ದಭದಲ್ಲಿ ಕೋಳಿ ಕಾಲಿಗೆ ಕಟ್ಟುವ ಬಾಲ್ (ಚೂರಿ) ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Bajpe Police Arrests 6 In Raid On Cockfight At Nerlapadavu

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Six persons were arrested after the Bajpe police raided an area where illegal cockfight was going on at Nerlapadav in Mangaluru here on November 17.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ