ಶವಯಾತ್ರೆ ವೇಳೆ ಹಿಂಸಾಚಾರ: ಐವರು ಹಿಂದು ಮುಖಂಡರ ವಿರುದ್ಧ ಎಫ್‌ಐಆರ್

Posted By:
Subscribe to Oneindia Kannada

ಮಂಗಳೂರು, ಜುಲೈ 11 : ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್)ದ ಕಾರ್ಯಕರ್ತ ಶರತ್ ಮಡಿವಾಳ ಶವಯಾತ್ರೆ ವೇಳೆ ಗಲಭೆ ಸೃಷ್ಠಿಸಿದ ಆರೋಪದ ಮೇಲೆ ಐವರು ಹಿಂದು ಸಂಘಟನೆಯ ನಾಯಕರ ವಿರುದ್ಧ ಐಪಿಸಿ ಸೆಕ್ಷನ್ 307(ಕೊಲೆ ಯತ್ನ)ರ ಅಡಿಯಲ್ಲಿ ಎಫ್ ಐಆರ್ ದಾಖಲಾಗಿದೆ.

ಕಾಂಗ್ರೆಸ್ ನಿಂದ 144 ಸೆಕ್ಷನ್ ದುರ್ಬಳಕೆ: ಬಿಜೆಪಿಯ ಸಂಜೀವ ಆರೋಪ

ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯದರ್ಶಿ ಸತ್ಯಜಿತ್‌ ಸುರತ್ಕಲ್, ಬಜರಂಗದಳ ಪ್ರಾಂತ ಸಂಯೋಜಕ ಶರಣ್ ಪಂಪ್ ವೆಲ್, ಬಜರಂಗದಳದ ಮುಖಂಡ ಪ್ರದೀಪ್‌ ಪಂಪ್ ವೆಲ್, ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಪೂಂಜ, ಬಜರಂಗದಳದ ದಕ್ಷಿಣ ಪ್ರಾಂತ ಗೋರಕ್ಷಾ ಪ್ರಮುಖ‌ ಮುರಳಿಕೃಷ್ಣ ಹಸಂತಡ್ಕ ಸೇರಿದಂತೆ ಬಿಜೆಪಿ ಹಾಗೂ ಬಜರಂಗದಳದ 20ಕ್ಕೂ ಹೆಚ್ಚು ಜನರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Bantwal Police Register FIR against Hindu Leaders for heels of violence

ದಕ್ಷಿಣ ಕನ್ನಡ ಎಸ್‌ಪಿ ಸಿ.ಎಚ್‌.ಸುಧೀರ್‌ಕುಮಾರ್‌ ರೆಡ್ಡಿ ನೇತೃತ್ವದಲ್ಲಿ ಹಲವು ತಂಡಗಳು ತಲೆಮರಿಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ನಡೆಸಿವೆ.

ಇವರ ವಿರುದ್ಧ ಕಾನೂನು ಬಾಹಿರವಾಗಿ ಗುಂಪು ಸೇರಿರುವುದು, ಗಲಭೆ ನಡೆಸಿರುವುದು, ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿರುವುದು, ಶಾಂತಿಭಂಗ ಉಂಟುಮಾಡುವ ಉದ್ದೇಶದಿಂದ ನಿಂದನೆ ಮಾಡಿರುವುದು, ಅನುಚಿತ ವರ್ತನೆ, ಸರ್ಕಾರದ ಆದೇಶ ಉಲ್ಲಂಘನೆ ಹಾಗೂ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ ಆರೋಪಗಳಡಿ ಎಫ್‌ಐಆರ್‌ ದಾಖಲು ಮಾಡಲಾಗಿದೆ.

ಶರತ್‌ ಅವರ ಶವಯಾತ್ರೆ ವೇಳೆ ಬಂಟ್ವಾಳ ತಾಲ್ಲೂಕಿನ ಕೈಕಂಬದಿಂದ ಬಿ.ಸಿ.ರೋಡ್‌ವರೆಗಿನ ಮಾರ್ಗದಲ್ಲಿ ನಡೆದ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಈ ಮೊಕದ್ದಮೆ ದಾಖಲಿಸಲಾಗಿದೆ ಎಂದು ಸುಧೀರ್‌ಕುಮಾರ್‌ ರೆಡ್ಡಿ ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Close on the heels of violence during the funeral procession of Sharath Madivala, Bantwal police filed cases against five leaders of Hindu fringe groups on Sunday.
Please Wait while comments are loading...