ವೈದ್ಯರ ಮುಷ್ಕರ ಸಾವಿನ ಸಂಖ್ಯೆ 11ಕ್ಕೆ ಏರಿಕೆ

Posted By:
Subscribe to Oneindia Kannada

ಮಂಗಳೂರು, ನವೆಂಬರ್ 17 : ಬೆಳಗಾವಿಯಲ್ಲಿ ನಡೆಯುತ್ತಿರುವ ವೈದ್ಯರ ಮುಷ್ಕರದ ಹಿನ್ನಲೆ ವಿಜಯಪುರದಲ್ಲಿ ಲಕ್ಷ್ಮೀಬಾಯಿ ಸೊನ್ನ ಅವರಿಗೆ ಆರೋಗ್ಯದಲ್ಲಿ ಏರುಪೇರಾದ ನಂತರ ತುರ್ತು ಚಿಕಿತ್ಸೆ ದೊರೆಯದೆ ಮೃತಪಟ್ಟಿದ್ದಾರೆ.

ಇನ್ನು ಚಿಕ್ಕಬಳ್ಳಾಪುರದಲ್ಲಿ ನಾಲ್ಕು ತಿಂಗಳ ಮಗು ತೀವ್ರ ಜ್ವರದಿಂದ ಸಾವನ್ನಪ್ಪಿದೆ. ಶಿವಮೊಗ್ಗದಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದ ವೀರಯ್ಯ ಅವರಿಗೆ ತುರ್ತು ಚಿಕಿತ್ಸೆ ದೊರೆಯದೆ ಮೃತಪಟ್ಟಿದ್ದಾರೆ.

ಸೂಕ್ತ ಚಿಕಿತ್ಸೆ ದೊರೆಯದೆ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಪುತ್ತೂರು ವಿವೇಕಾನಂದ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿಯಾಗಿದ್ದ ಪೂಜಾ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಳು. ವಾರಕ್ಕೆರೆಡು ಬಾರಿ ಪುತ್ತೂರಿನ ಸಿಟಿ ಆಸ್ಪತ್ರೆಯಲ್ಲಿ ಆಕೆಗೆ ಡಯಾಲಿಸಿಸ್ ನಡೆಯುತ್ತಿತ್ತು.

ಮಂಗಳವಾರ ಪುತ್ತೂರು ಸಿಟಿ ಆಸ್ಪತ್ರೆಗೆ ಸೇರಿಸಿದಾಗ ರಕ್ತದಲ್ಲಿ ಸಮಸ್ಯೆ ಇದೆ ತಿಳಿಯಿತು. ವೈದ್ಯರು ಡಯಾಲಿಸಿಸ್ ಮಾಡಿಸುವಂತೆ ಸಲಹೆ ನೀಡಿದ್ದರು. ಮಂಗಳೂರು ನೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ತೆರಳಿದಾಗ ವೈದ್ಯರು ಲಭ್ಯವಿರಲಿಲ್ಲ. ಗುರುವಾರ ರಾತ್ರಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಪೂಜಾ ಕೊನೆಯುಸಿರೆಳೆದಿದ್ದಾಳೆ.

Bcom student die due to Private Doctor protest

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Private doctors are no indefinite strike from Monday. State Government and Doctor association talk failed. People lost thir life because of unavailability of timely treatment.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ