ಸೆ.2ರಂದು ದಕ್ಷಿಣ ಕನ್ನಡದಲ್ಲಿ ಸ್ವಯಂ ಪ್ರೇರಿತ ಬಂದ್

By: ಒನ್ ಇಂಡಿಯಾ ಪ್ರತಿನಿಧಿ
Subscribe to Oneindia Kannada

ಮಂಗಳೂರು, ಸೆಪ್ಟೆಂಬರ್ 01 : ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಸೆಪ್ಟೆಂಬರ್ 2ರ ಭಾರತ್‌ ಬಂದ್‌ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಬೆಂಬಲ ನೀಡಲಾಗಿದೆ. ಜಿಲ್ಲಾದ್ಯಂತ ಸ್ವಯಂ ಪ್ರೇರಿತ ಬಂದ್ ಆಚರಿಸಲಾಗುತ್ತದೆ ಎಂದು ಕಾರ್ಮಿಕ ಸಂಘಟನೆಗಳು ಹೇಳಿವೆ.[ದಕ್ಷಿಣ ಕನ್ನಡದಲ್ಲಿ ಶಾಲಾ-ಕಾಲೇಜಿಗೆ ರಜೆ ಇಲ್ಲ]

ಭಾರತ್ ಬಂದ್‌ನಿಂದಾಗಿ ಜನಜೀವನ ಅಸ್ತವ್ಯಸ್ತವಾಗುವ ಸಂಭವವಿದೆ. ಎಲ್ಲಾ ಕಾರ್ಮಿಕ ವಿಭಾಗಗಳ 17 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಂದ್ ಕರೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲಾ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.[ಮುಷ್ಕರ:ಯಾವ ಸೇವೆ ಲಭ್ಯ? ಯಾವುದು ಅಲಭ್ಯ?]

Bharat Bandh on September 2 : Holiday for schools in Mangaluru

ಅಂಗಡಿ ಮುಂಗಟ್ಟುಗಳಿಗೆ ರಜೆ ಘೋಷಿಸಲಾಗಿದೆ. ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಮುಷ್ಕರ ನಡೆಯಲಿದ್ದು ಟ್ಯಾಕ್ಸಿ, ಆಟೋ ಬಸ್ ಯಾವುದೇ ವಾಹನಗಳು ರಸ್ತೆಗೆ ಇಳಿಯುವುದಿಲ್ಲ. ಆದ್ದರಿಂದ, ದೂರದ ಊರಿಗೆ ಪ್ರಯಾಣ ಬೆಳೆಸುವವರು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವುದು ಒಳಿತು. [ಸೆ. 2ರ ಕಾರ್ಮಿಕ ಸಂಘಟನೆಗಳ ಮುಷ್ಕರ ಯಾಕೆ?]

ತುರ್ತು ಸೇವೆಗಳಾದ ಆಂಬ್ಯುಲೆನ್ಸ್, ಔಷಧ, ಹಾಲು ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ.

ಪರೀಕ್ಷೆ ಮುಂದೂಡಿಕೆ : ಮುಷ್ಕರದ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಸೆ. 2 ರಂದು ನಿಗದಿಪಡಿಸಿದ್ದ ಬಿಎ/ ಬಿಕಾಂ ಪರೀಕ್ಷೆಗಳನ್ನು ಸೆ. 27ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ರಾಜ್ಯಮುಕ್ತ ವಿಶ್ವವಿದ್ಯಾಲಯ ತಿಳಿಸಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Colleges and Schools in Dakshina Kannada will remain closed on September 2, 2016 on Bharat Bandh.
Please Wait while comments are loading...