ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನೈಋತ್ಯ ಶಿಕ್ಷಕರ ಕ್ಷೇತ್ರ: ಬಿಜೆಪಿ ಪಾರುಪತ್ಯ ಅಂತ್ಯ

|
Google Oneindia Kannada News

ಮಂಗಳೂರು ಜೂನ್ 13: ವಿಧಾನ ಪರಿಷತ್ ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಳೆದ 30 ವರ್ಷಗಳಿಂದ ಸಾಧಿಸಿದ್ದ ಬಿಜೆಪಿ ಅಧಿಪತ್ಯ ಅಂತ್ಯಗೊಂಡಿದೆ.

ವಿಧಾನ ಪರಿಷತ್ ನ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಗಣೇಶ ಕಾರ್ಣಿಕ್ ಪರಾಜಯಗೊಳ್ಳುವ ಮೂಲಕ ಬಿಜೆಪಿ ಹಿಡಿತದಲ್ಲಿದ್ದ ಶಿಕ್ಷಕರ ಕ್ಷೇತ್ರವನ್ನು ಕಳೆದುಕೊಂಡಂತಾಗಿದೆ.

ಪರಿಷತ್ ಚುನಾವಣೆ: ಕಾಂಗ್ರೆಸ್ 1, ಜೆಡಿಎಸ್ 2, ಬಿಜೆಪಿ 3 ಸ್ಥಾನಗಳಲ್ಲಿ ಗೆಲುವು ಪರಿಷತ್ ಚುನಾವಣೆ: ಕಾಂಗ್ರೆಸ್ 1, ಜೆಡಿಎಸ್ 2, ಬಿಜೆಪಿ 3 ಸ್ಥಾನಗಳಲ್ಲಿ ಗೆಲುವು

ಈ ಕ್ಷೇತ್ರದಿಂದ ಪ್ರಥಮ ಬಾರಿಗೆ ಜೆಡಿಎಸ್ ವಿಧಾನ ಪರಿಷತ್ ಗೆ ಪ್ರವೇಶ ಪಡೆದಿದೆ. ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಬೋಜೆಗೌಡ ಚುನಾವಣೆಯಲ್ಲಿ ಜಯ ಸಾಧಿಸುವುದರೊಂದಿಗೆ ಪ್ರಥಮ ಬಾರಿಗೆ ಈ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಪ್ರವೇಶ ಪಡೆದಿದ್ದಾರೆ.

BJP Ganesh Karnik loses MLC election

ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಸತತವಾಗಿ ಗೆಲುವು ಸಾಧಿಸುತ್ತಾ ಬಂದಿದೆ. ಶಿವಮೊಗ್ಗದ ಪದ್ಮಾವತಿ ವಿಠಲ್ ರಾವ್ ಮೊದಲ ಬಾರಿಗೆ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ನಂತರ ದಕ್ಷಿಣ ಕನ್ನಡ ಜಿಲ್ಲೆಯ ಬಾಲಕೃಷ್ಣ ಭಟ್ 2 ಬಾರಿ ಕ್ಷೇತ್ರವನ್ನು ವಿಧಾನ ಪರಿಷತ್ ನಲ್ಲಿ ಪ್ರತಿನಿಧಿಸಿದ್ದರು.

ನೈಋತ್ಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಗೆ ದಕ್ಷಿಣ ಕನ್ನಡ , ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗು ಹೊನ್ನಳ್ಳಿ ತಾಲೂಕುಗಳು ಬರುತ್ತವೆ. 30 ವಿಧಾನ ಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಈ ಕ್ಷೇತ್ರವನ್ನು ಕಳೆದ 2 ಅವಧಿಗಳಿಂದ ಕ್ಯಾ. ಗಣೇಶ್ ಕಾರ್ಣಿಕ್ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.

ಈ ಮೂರನೇ ಅವಧಿಗೂ ಬಿಜೆಪಿ ಗಣೇಶ್ ಕಾರ್ಣಿಕ್ ಅವರನ್ನು ಕಣಕ್ಕಿಳಿಸಿತ್ತು. ಆದರೆ ಚುನಾವಣೆಯಲ್ಲಿ ಜೆಡಿಎಸ್ ನ ಆಭ್ಯರ್ಥಿ ಭೋಜೆ ಗೌಡ ಎದುರು ಸೋಲು ಅನುಭವಿಸುವ ಮೂಲಕ ಹ್ಯಾಟ್ರಿಕ್ ಸಾಧಿಸುವ ಕಾರ್ಣಿಕ್ ಅವರ ಕನಸು ಭಗ್ನಗೊಂಡಿದೆ.

English summary
Big blow for BJP In MLC election. BJP candidate Ganesh Karnik lost the election to JDS candidate S L Boje Gowda in Teachers constituency .
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X