ಮಂಗಳೂರಿನಲ್ಲಿ ನಕಲಿ ಮತದಾರರ ಪಟ್ಟಿ, ಅಧಿಕಾರಿಗಳ ಶಾಮೀಲು ಆರೋಪ

Posted By:
Subscribe to Oneindia Kannada

ಮಂಗಳೂರು, ಏಪ್ರಿಲ್ 9: ರಾಜ್ಯ ವಿಧಾನಸಭಾ ಚುನಾವಣೆಯ ದಿನ ಹತ್ತಿರವಾಗುತ್ತಿದ್ದಂತೆ ನಡೆಯುತ್ತಿರುವ ಚುನಾವಣಾ ಅಕ್ರಮಗಳು ಬಯಲಾಗುತ್ತಿವೆ. ಮತದಾರರ ಪಟ್ಟಿಯಲ್ಲಿ ನಕಲಿ ಮತದಾರರ ಹಾವಳಿ ಶುರುವಾಗಿದೆ. ಮಂಗಳೂರಿನ ಶಕ್ತಿನಗರದ ನಾಲ್ಯಪದವು ವಾರ್ಡಿನಲ್ಲಿ ಒಂದೇ ಡೋರ್ ನಂಬರಿನಲ್ಲಿ 260ಕ್ಕೂ ಹೆಚ್ಚು ನಕಲಿ ಮತಗಳಿರುವುದು ಪತ್ತೆಯಾಗಿವೆ ಎಂದು ಆರೋಪಿಸಲಾಗಿದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ

ಈ ಕುರಿತು ಬಿಜೆಪಿ ಮುಖಂಡರು ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸಿ ನಕಲಿ ಮತದಾರರನ್ನು ಮತಪಟ್ಟಿಯಿಂದ ತೆಗೆದು ಹಾಕುವ ಪ್ರಕ್ರಿಯೆ ಆರಂಭಿಸಿದ್ದಾರೆ ಎಂದು ಹೇಳಲಾಗಿದೆ. ಇದೀಗ ಮತ್ತೆ ಡಿಲೀಷನ್ ಪ್ರಕ್ರಿಯೆ ನಡೆದ ಬಳಿಕ ಮತಪಟ್ಟಿ ಬಿಡುಗಡೆಯಾಗಿದ್ದರೂ, 69 ಮತದಾರರು ಒಂದೇ ಡೋರ್ ನಂಬರಿನಲ್ಲಿ ವಾಸವಿರುವುದು ಪತ್ತೆಯಾಗಿರುವುದು ಅಧಿಕಾರಿಗಳ ವಿರುದ್ದವೇ ಅನುಮಾನ ಕಾಡಲಾರಂಭಿಸಿದೆ.

BJP leaders alleged that fake voters list existed in Mangaluru

ಮಂಗಳೂರಿನ ಮೆಡಿಕಲ್ ಕಾಲೇಜುಗಳಲ್ಲಿ ಕಲಿಯುತ್ತಿರುವ ಕೇರಳ ಮೂಲದ ವಿದ್ಯಾರ್ಥಿಗಳು ಮತದಾರರ ಪಟ್ಟಿಗೆ ಸೇರ್ಪಡೆಗೊಂಡಿರುವ ಬಗ್ಗೆ ಆರೋಪ ಕೇಳಿಬಂದಿದೆ. ಶಕ್ತಿನಗರದಲ್ಲಿರುವ ವಿದ್ಯಾರ್ಥಿನಿಯರ ಹಾಸ್ಟೆಲ್ ಇರುವ 119- 20 ಡೋರ್ ನಂಬರಿನಲ್ಲಿ 69 ಮತದಾರರನ್ನು ಸೇರ್ಪಡೆಗೊಳಿಸಿರುವುದು ಪತ್ತೆಯಾಗಿದೆ. ಈ ಕುರಿತು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಮತದಾರರರ ಪಟ್ಟಿಯಲ್ಲಿ ನಿಮ್ಮ ಹೆಸರು ಹುಡುಕುವುದು ಹೇಗೆ?

BJP leaders alleged that fake voters list existed in Mangaluru

ಈ ಹಿನ್ನೆಲೆಯಲ್ಲಿ ಸ್ಥಳೀಯ ಚುನಾವಣಾಧಿಕಾರಿಗಳು ಕಾಂಗ್ರೆಸ್ ಪರವಾಗಿ ಕೆಲಸ ಮಾಡುತ್ತಿದ್ದಾರೆಂದು ಬಿಜೆಪಿ ಮುಖಂಡರು ಆರೋಪಿಸಿದ್ದು ಅಧಿಕಾರಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಿಗೆ ದೂರು ಸಲ್ಲಿಸಿದ್ದಾರೆ

BJP leaders alleged that fake voters list existed in Mangaluru

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
BJP leader alleged that fake voters existed in voters list of Shakthinagara area of Mangaluru. BJP leaders also alleged that election officers involved in preparing fake voters list.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ