ಜಾರ್ಜ್ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಯವರಿಗಿಲ್ಲ : ರಮಾನಾಥ ರೈ

Posted By:
Subscribe to Oneindia Kannada

ಮಂಗಳೂರು, ಅಕ್ಟೋಬರ್ 30: ಡಿವೈಎಸ್ಪಿ ಎಂಕೆ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ಸಚಿವ ಜಾರ್ಜ್ ಅವರ ಮೇಲೆ ಎಫ್ಐಆರ್ ದಾಖಲಿಸಿದ ಮಾತ್ರಕ್ಕೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅಭಿಪ್ರಾಯಪಟ್ಟಿದ್ದಾರೆ.

ಮುತಾಲಿಕ್ ಗೆ ಹಿಂದೂ ಧರ್ಮದ ಪಾರುಪತ್ಯ ಕೊಟ್ಟಿಲ್ಲ: ಸಚಿವ ರೈ

ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರದ ಹಲವಾರು ಸಚಿವರುಗಳ ಮೇಲೆ ಕ್ರಿಮಿನಲ್ ಪ್ರಕರಣಗಳಲ್ಲಿ ಎಫ್ಐಆರ್ ದಾಖಲಾಗಿದೆ. ಈ ಹಿನ್ನಲೆಯಲ್ಲಿ ಸಚಿವ ಜಾರ್ಜ್ ಅವರ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಗಿಲ್ಲ ಎಂದು ಅವರು ಕಿಡಿಕಾರಿದರು .

BJP Misusing CBI, No Moral Rights To Demand George’s Resignation – Ramanath Rai

ಕಾಂಗ್ರೆಸ್ ಮೇಲೆ ಬಿಜೆಪಿ ಸುಮ್ಮನೆ ಗೂಬೆ ಕೂರಿಸಲು ಯತ್ನಿಸುತ್ತಿದೆ ಎಂದು ರೈ ಆರೋಪಿಸಿದರು. ಕೇಂದ್ರ ಸರ್ಕಾರ ಸಿಬಿಐ ಸಂಸ್ಥೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ದೂರಿದ ರೈ, 'ವಿನಾಕಾರಣ ಕಾಂಗ್ರೆಸ್ ನಾಯಕರ ಮನೆಯ ಮೇಲೆ ಐಟಿ, ಸಿಬಿಐ ದಾಳಿ ನಡೆಸಿ ಅವರ ನೈತಿಕ ಸ್ಥೈರ್ಯ ಕುಗ್ಗಿಸುವ ಯತ್ನವನ್ನು ಬಿಜೆಪಿ ಮಾಡುತ್ತಿದೆ," ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಳ್ಳಾರಿಯಲ್ಲಿ ಶೇಕಡಾ 60% ರಷ್ಟು ಅರಣ್ಯ ಭೂಮಿಯಲ್ಲಿ ಜನಾರ್ದನ ರೆಡ್ಡಿ ಕುಟುಂಬ ಅಕ್ರಮ ಗಣಿಗಾರಿಕೆ ನಡೆಸಿದೆ ಎಂದು ಸಚಿವ ರಮಾನಾಥ ರೈ ಆರೋಪಿಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Minister George need not resign in the DySP MK Ganapathy suicide case. Because during the CID investigations George had resigned from the post. After the CID investigation, it was clear that George was not guilty and the Chief Minister has taken him back in the cabinet said Ramanath Rai here on October 30.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ