ಗುಂಡೂರಾವ್ ಗೆ ಚಪ್ಪಲಿ ಕೊರಿಯರ್ ಮಾಡಿದ ಮಂಗಳೂರು ಬಿಜೆಪಿಗರು

Posted By:
Subscribe to Oneindia Kannada

ಮಂಗಳೂರು, ಏಪ್ರಿಲ್ 16: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ನೀಡಿರುವ ವಿವಾದಾತ್ಮಕ ಹೇಳಿಕೆ ವಿರುದ್ದ ಬಿಜೆಪಿ ಬೀದಿಗಿಳಿದಿದೆ. ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಬಂದರೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ಹೇಳಿಕೆ ನೀಡಿದ್ದ ದಿನೇಶ್ ಗುಂಡೂರಾವ್ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿದೆ.

ಮಂಗಳೂರಿನಲ್ಲಿ ದಿನೇಶ ಗುಂಡೂರಾವ್ ವಿರುದ್ದ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಸೋಮವಾರ ಸಂಜೆ ವಿನೂತನ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ದಿನೇಶ್ ಗುಂಡೂರಾವ್ ಹಾಗೂ ಕಾಂಗ್ರೆಸ್ ವಿರುದ್ದ ಘೋಷಣೆ ಕೂಗಿದರು.

BJP Yuva Morcha stages protest against Dinesh Gundu Rao in Mangaluru.

ಯೋಗಿ ಬಗ್ಗೆ ದಿನೇಶ್ ಹೇಳಿಕೆಗೆ ಬಿಜೆಪಿ ಖಂಡನೆ

ದಿನೇಶ್ ಗುಂಡೂರಾವ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ಅವರ ಚಪ್ಪಲಿ ಹೇಳಿಕೆ ವಿರುದ್ಧ ಹಳೆ ಚಪ್ಪಲಿಗಳನ್ನು ಕಳುಹಿಸಲು ಮುಂದಾಗಿದ್ದಾರೆ. ಪ್ರತಿಭಟನೆಯ ಅಂಗವಾಗಿ ಹಳೆ ಚಪ್ಪಲಿಗಳನ್ನು ಕಾರ್ಯಕರ್ತರು ಸಂಗ್ರಹಿಸಿದರು. ಸಂಗ್ರಹಿಸಿದ ಹಳೆ ಚಪ್ಪಲಿ ಗಳನ್ನು ಬಿಜೆಪಿ ಯುವಮೋರ್ಚಾದ ಕಾರ್ಯಕರ್ತರು ಕೊರಿಯರ್ ಮೂಲಕ ದಿನೇಶ್ ಗುಂಡೂರಾವ್ ಅವರಿಗೆ ಪಾರ್ಸೆಲ್ ಮಾಡಲಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
BJP Yuva Morcha workers on Sunday stage protest in Mangaluru against congress leader Dinesh Gundu Rao's remarks on Uttar Pradesh chief minister Yogi Adityanath.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ