• search

'ಕರಾವಳಿಯಲ್ಲಿ ಬಿಜೆಪಿ ಗೆಲುವು ಮೃತ ಹಿಂದೂ ಕಾರ್ಯಕರ್ತರಿಗೆ ಸಮರ್ಪಣೆ'

Posted By:
Subscribe to Oneindia Kannada
For Quick Alerts
ALLOW NOTIFICATIONS
For Daily Alerts

  ಮಂಗಳೂರು, ಮೇ 15: ಕರಾವಳಿಯಲ್ಲಿಕಾಂಗ್ರೆಸ್ ಧೂಳಿಪಟವಾಗಿದೆ. ಬಿಜೆಪಿಯ ದಿಗ್ವಿಜಯವನ್ನು ದುಷ್ಕರ್ಮಿಗಳ ದಾಳಿಗೆ ಬಲಿಯಾದ ಪ್ರಶಾಂತ್ ಪೂಜಾರಿ, ಶರತ್ ಮಡಿವಾಳ್ , ದೀಪಕ್ ರಾವ್ ಮಡಿಲಿಗೆ ಅರ್ಪಣೆ ಮಾಡುವುದಾಗಿ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

  ಮಂಗಳೂರಿನಲ್ಲಿ ಮಂಗಳವಾರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ಕರಾವಳಿಯಲ್ಲಿ ಜನಾಶೀರ್ವಾದ ಬಿಜೆಪಿಗೆ ದೊರೆತಿದೆ. ಜಿಲ್ಲೆಯ 8 ಕ್ಷೇತ್ರಗಳ ಪೈಕಿ 7 ರಲ್ಲಿ ಬಿಜೆಪಿ ಆಭ್ಯರ್ಥಿಗಳು ಜಯಗಳಿಸಿದ್ದಾರೆ. ದುರಾಡಳಿತ, ಭ್ರಷ್ಟಾಚಾರ, ಕೋಮುಭಾವನೆ ಕೆರಳಿಸುವ ಗೂಂಡಾಗಿರಿ ರಾಜಕಾರಣದಿಂದ ಜನರು ಬೇಸತ್ತಿದ್ದರು. ಈ ಹಿನ್ನೆಲೆಯಲ್ಲಿ ಕರಾವಳಿಯ ಜನರು ಕಾಂಗ್ರೆಸ್ ಪಕ್ಷವನ್ನು ತಿಸ್ಕರಿಸಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

  ಕರ್ನಾಟಕ ಚುನಾವಣಾ ಫಲಿತಾಂಶ 2018: ಬಿಜೆಪಿ ಗೆದ್ದವರ ಪಟ್ಟಿ

  ಬಿಜೆಪಿ ಜಯಕ್ಕೆ ಕಾರಣರಾದ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ನಳಿನ್ ಕುಮಾರ್ ಕಟೀಲ್, ಜನ ಹಾಕಿದ ಮತಕ್ಕೆ ಚ್ಯುತಿಯಾಗದಂತೆ ಆಡಳಿತ ನಡೆಸಲಾಗುವುದು ಎಂದು ಹೇಳಿದರು. ಕೇಂದ್ರದ ಜನಪರ ಯೋಜನೆಗಳು ಕಾಂಗ್ರೆಸ್ ನ ನಿರ್ಲಕ್ಷ್ಯದಿಂದಾಗಿ ಕುಂಠಿತವಾಗಿದ್ದವು ಎಂದು ಆರೋಪಿಸಿದ ಅವರು ಬಿಜೆಪಿ ಶಾಸಕರ ಮೂಲಕ ಕೇಂದ್ರದ ಯೋಜನೆಗಳನ್ನು ಪೂರ್ಣರೀತಿಯಲ್ಲಿ ಅನುಷ್ಠಾನ ಮಾಡುತ್ತೇವೆ ಎಂದು ಹೇಳಿದರು.

  BJPs victory would be offered to murdered Hindu workers says MP Nalin

  ಸೋಲಿನ ಬಳಿಕ ಇ ವಿ ಎಂ ನಲ್ಲಿ ಸಮಸ್ಯೆಯಿದೆ ಎಂದು ಕಾಂಗ್ರೆಸ್ ಅಭ್ಯರ್ಥಿಗಳು ಆರೋಪಿಸಿದ್ದ ವಿಚಾರವಾಗಿ ಪ್ರತಿಕ್ರಿಯಿಸಿದ ನಳಿನ್ , ಮಂಗಳೂರು ಕ್ಷೇತ್ರದಲ್ಲಿ ಹಾಗೂ ಬಾದಾಮಿಯಲ್ಲಿ ಏನಾಗಿದೆ? ಅಲ್ಲಿ ಕಾಂಗ್ರೆಸ್ ಜಯಗಳಿಸಿದೆ. ಅಲ್ಲಿ ಏನಾದರೂ ಬೇರೆ ಇವಿಎಂ ಮಷಿನ್ ಬಂದಿದೆಯೇ ಎಂದು ನೋಡಿ ಹೇಳಲಿ ಎಂದು ವ್ಯಂಗ್ಯವಾಡಿದರು.

  ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸರಕಾರ ರಚನೆಯ ಮಾತುಕತೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಒಂದು‌‌ ದಿನ ಕಾದು ನೋಡಿದಲ್ಲಿ ಎಲ್ಲಾ ತಿಳಿಯುತ್ತದೆ ಎಂದು ಮಾರ್ಮಿಕವಾಗಿ ನುಡಿದರು. ಈ ಚುನಾವಣೆ ಕಾಂಗ್ರೆಸ್ ಮುಕ್ತ ಕರ್ನಾಟಕ, ಕಾಂಗ್ರೆಸ್ ಮುಕ್ತ ಕರಾವಳಿ ಸಂದೇಶ ನೀಡಿದೆ. ಈ ಚುನಾವಣೆಯಲ್ಲಿ ಪೇಜ್‌ ಪ್ರಮುಖರು ಮಹತ್ವದ ಪಾತ್ರ ವಹಿಸಿದ್ದರಿಂದ ಗೆಲುವು ಸಾಧ್ಯವಾಗಿದೆ ಎಂದು ಅವರು ಹೇಳಿದರು.

  ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

  English summary
  Karnataka assembly elections 2018: MP Nalin Kumar Kateel said that, the party's victory would be offered to Prashant Poojari, Sharat Madival and Deepak Rao, who are the victims of the attack in Mangaluru. He made this press meet here at the BJP office in Mangaluru on Tuesday 15.

  Oneindia ಬ್ರೇಕಿಂಗ್ ನ್ಯೂಸ್,
  ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

  X
  We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more