ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಂಟ್ವಾಳ: ಭಾರಿ ಮಳೆಗೆ ಮುರಿದು ಬಿದ್ದ ಹೆದ್ದಾರಿ ಸೇತುವೆ

By ಉಡುಪಿ ಪ್ರತಿನಿಧಿ
|
Google Oneindia Kannada News

ಮಂಗಳೂರು, ಜೂನ್ 25: ಕರಾವಳಿ ಜಿಲ್ಲೆಯಾದ್ಯಂತ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಹಿನ್ನಲೆಯಲ್ಲಿ ಬಂಟ್ವಾಳದಲ್ಲಿ ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ತಪ್ಪಿದೆ. ಬಂಟ್ವಾಳ-ಕುಪ್ಪೆಪದವು ಸಂಪರ್ಕಿಸುವ ರಾಜ್ಯ ಹೆದ್ದಾರಿಯ ಮೂಲರಪಟ್ನ ಎಂಬಲ್ಲಿ ಫಲ್ಗುಣಿ ನದಿಗೆ ಕಟ್ಟಲಾಗಿದ್ದ ಸೇತುವೆ ಇಂದು ಸಂಜೆ ಏಕಾಏಕಿ ಕುಸಿದು ಬಿದ್ದಿದೆ.

ುಮಾರು 35 ವರ್ಷಗಳ ಹಿಂದೆ ನಿರ್ಮಿಸಲಾಗಿರುವ ಈ ಸೇತುವೆ ಕುಸಿಯುವ ಭೀತಿಯನ್ನು ಸ್ಥಳಿಯ ನಿವಾಸಿಗಳು ವ್ಯಕ್ತಪಡಿಸಿದ್ದರು . ಈ ವಿಚಾರವನ್ನು ಸ್ಥಳೀಯರು ಜಿಲ್ಲಾಡಳಿತದ ಗಮನಕ್ಕೂ ತಂದಿದ್ದರು. ಫಲ್ಗುಣಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಯಿಂದ ಸೇತುವೆ ಶಿಥಿಲಗೊಂಡಿದೆ ಎಂದು ಆರೋಪಿಸಲಾಗಿತ್ತು.

ಮಂಗಳೂರು: ತಡೆಗೋಡೆ ಕುಸಿದು ದೊಡ್ಡಿಕಟ್ಟ ಪ್ರದೇಶದಲ್ಲಿ ಅವಾಂತರ ಸೃಷ್ಟಿಮಂಗಳೂರು: ತಡೆಗೋಡೆ ಕುಸಿದು ದೊಡ್ಡಿಕಟ್ಟ ಪ್ರದೇಶದಲ್ಲಿ ಅವಾಂತರ ಸೃಷ್ಟಿ

ಫಲ್ಲುಣಿ ನದಿಯಲ್ಲಿ ಇಂದು ನೀರಿನ ಹರಿವು ಹೆಚ್ಚಾಗುತ್ತಿದ್ದಂತೆ ಇಂದು ಏಕಾಏಕಿ ಸೇತುವೆ ಕುಸಿದು ಬಿದ್ದಿದೆ. ಈ ಸಂದರ್ಭದಲ್ಲಿ ಯಾವುದೇ ವಾಹನಗಳ ಸೇತುವೆಯಲ್ಲಿ ಸಂಚರಿಸದೇ ಇದ್ದ ಪರಿಣಾಮ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

Bridge collapsed due to heavy rain in Bantwal

ಈ ಸೇತುವೆ ಕೆಳ ಭಾಗದಲ್ಲಿ ಅಕ್ರಮವಾಗಿ ಮರಳುಗಾರಿಕೆಯೂ ನಡೆಯುತ್ತಿದ್ದು, ಹಲವು ಬಾರಿ ಈ ಅಕ್ರಮಕ್ಕೆ ಕಡಿವಾಣ ಹಾಕಲಾಗಿದ್ದರೂ ರಾಜಕೀಯ ಪ್ರಭಾವ ಬಳಸಿ ಅಕ್ರಮ ಮರಲುಗಾರಿಕೆಯನ್ನು‌ ನಡೆಸಲಾಗುತ್ತಿತ್ತು ಎಂದು ದೂರಲಾಗಿದೆ . ಸೇತುವೆ ಕುಸಿದು ಬೀಳಲು ಇದು ಪ್ರಮುಖ ಕಾರಣ ಎನ್ನಲಾಗುತ್ತಿದೆ.

ಸೇತುವೆ ಕುಸಿದಿರುವ ಸ್ಥಳಕ್ಕೆ ಜಿಲ್ಲಾಡಳಿತ ಅಧಿಕಾರಿಗಳು ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ. ಸೇತುವೆ ಯ ಎರಡೂ ತುದಿಗಳಲ್ಲಿ ಪೊಲೀಸ್ ಭಧ್ರತೆ ನಿಯೋಜಿಸಲಾಗಿದ್ದು, ಸಾರ್ವಜನಿಕರು ಮುರಿದ ಸೇತುವೆ ಸನಿಹ ಬರದಂತೆ ತಡೆಹಿಡಿಯಲಾಗುತ್ತಿದೆ.

English summary
In Bantwal taluk's Mullarpatna a bridge collapsed due to heavy rain. It was built on the Palguni river. After bridge collapse connection between many villages and Bantwal has been shut.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X