ಕೇಂದ್ರ ಬಜೆಟ್ ಬಗ್ಗೆ ಖಾದರ್, ರಮಾನಾಥ ರೈ ಹೇಳಿದ್ದೇನು?

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಫೆಬ್ರವರಿ 2: ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಮಂಡಿಸಿದ 2017ರ ಬಜೆಟ್ ಬಗ್ಗೆ ಕರಾವಳಿ ಮೂಲದ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಪನಗದೀಕರಣದಿಂದ ದೇಶದಲ್ಲಿ ಉದ್ಯೋಗಾವಕಾಶ ತಗ್ಗುತ್ತಿದೆ. ಇದಕ್ಕೆ ಬಜೆಟಿನಲ್ಲಿ ಏನೂ ಮಾಡಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ ಖಾದರ್ ಹೇಳಿದ್ದಾರೆ. ಇದೇ ವೇಳೇ ಬಜೆಟಿನಲ್ಲಿ ಕರಾವಳಿಯ ರೈಲ್ವೇ ಬೇಡಿಕೆಗಳನ್ನು ಇಡೇರಿಸಿಲ್ಲ ಅಂತ ಪರಿಸರ ಮತ್ತು ಅರಣ್ಯ ಸಚಿವ ರಮಾನಾಥ್ ರೈ ಹೇಳಿದ್ದಾರೆ.[ಅಭಿವೃದ್ಧಿ, ಉದ್ಯೋಗ ಸೃಷ್ಟಿಗೆ ಪೂರಕವಲ್ಲದ ಬಜೆಟ್:ಸಿದ್ದರಾಮಯ್ಯ]

Budget 2017: Minister U T Khadar and Ramanath Rai said they are unhappy

"ನೋಟು ನಿಷೇಧದ ನಂತರ ದೇಶದ ಬ್ಯಾಂಕುಗಳಲ್ಲಿ ಎಷ್ಟು ಹಣ ಠೇವಣಿಯಾಗಿದೆ ಎಂಬ ಮಾಹಿತಿಯನ್ನು ಬಜೆಟ್ ನಲ್ಲಿ ಬಹಿರಂಗಪಡಿಸಿಲ್ಲ. ಜನಸಾಮಾನ್ಯರ ಉಳಿತಾಯವನ್ನು ಕಪ್ಪು ಹಣ ಎಂದು ಹೇಳಿ ಕೇಂದ್ರ ಹೆಮ್ಮೆಪಡುತ್ತಿದೆ. ನೋಟು ನಿಷೇಧದ ಹಿಂದಿನ ಮೂರು ತಿಂಗಳಲ್ಲಿ ದೇಶದಲ್ಲಿ 2.5. ಲಕ್ಷ ಕೋಟಿ ರೂಪಾಯಿ ಹೂಡಿಕೆಯಾಗಿದ್ದರೆ, ನೋಟು ನಿಷೇಧ ನಂತರದ 3 ತಿಂಗಳಲ್ಲಿ ಇದು 1.5 ಲಕ್ಷ ಕೋಟಿಗೆ ತಗ್ಗಿದೆ. ಇದರಿಂದ ದೇಶದಲ್ಲಿ ಉದ್ಯೋಗಾವಕಾಶಗಳು ತಗ್ಗುತ್ತಿದೆ," ಎಂದು ಯು.ಟಿ ಖಾದರ್ ಹೇಳಿದ್ದಾರೆ.[ಜೇಟ್ಲಿ ಬಜೆಟನ್ನು ಠುಸ್ ಪಟಾಕಿ ಎಂದ ರಾಹುಲ್ ಗಾಂಧಿ]

Budget 2017: Minister U T Khadar and Ramanath Rai said they are unhappy

2017ರ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ರಮಾನಾಥ ರೈ, "ಕುಸಿಯುತ್ತಿರುವ ಅರ್ಥ ವ್ಯವಸ್ಥೆಯನ್ನು ಸರಿದಾರಿಗೆ ತರಲು ಬಜೆಟಿನಲ್ಲಿ ಯಾವುದೇ ಪರಿಹಾರ ಕ್ರಮಗಳನ್ನು ಕೈಗೊಂಡಿಲ್ಲ. ಉದ್ಯೋಗ ಸೃಷ್ಟಿಗೂ ಆದ್ಯತೆ ನೀಡಿಲ್ಲ. ಇದರಿಂದ ಕೆಳಹಂತದ ಆರ್ಥ ವ್ಯವಸ್ಥೆಯ ಮೇಲೆ ಕರಾಳ ಪರಿಣಾಮ ಬೀರುವ ಸಾಧ್ಯತೆ ಇದೆ. ರೈಲ್ವೆ ಬಜೆಟನ್ನೂ ಇದೇ ಬಜೆಟ್‌ನಲ್ಲಿ ಮಂಡಿಸಲಾಗಿದೆ. ಮಂಗಳೂರಿಗೆ ಆರ್ಥಿಕ ಶಕ್ತಿಯನ್ನು ವೃದ್ಧಿಸಲು ಆರ್ಥಿಕ ಆಧಾರಿತ ರೈಲ್ವೇ ಯೋಜನೆಗಳ ಅಗತ್ಯವಿತ್ತು. ಆದರೆ ಕರಾವಳಿಯ ಜನತೆಯ ದೀರ್ಘಕಾಲದ ರೈಲ್ವೆ ಬೇಡಿಕೆಗಳನ್ನು ಬಜೆಟಿನಲ್ಲಿ ಕಡೆಗಣಿಸಲಾಗಿದೆ," ಎಂದು ದೂರಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Minister U T Khadar and Ramanath Rai said that, they are unhappy with the 2017-18 Central government budget as it will not having new things.
Please Wait while comments are loading...