ಮಂಗಳೂರು : ಬಸ್ ಮಾಲೀಕ ಆತ್ಮಹತ್ಯೆಗೆ ಶರಣು

By: ಒನ್ ಇಂಡಿಯಾ ಪ್ರತಿನಿಧಿ
Subscribe to Oneindia Kannada

ಮಂಗಳೂರು, ಆಗಸ್ಟ್ 10 : ಬಸ್ ಮಾಲೀಕರೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಮಂಗಳೂರಿನಲ್ಲಿ ನಡೆದಿದೆ. ಅನಾರೋಗ್ಯದ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ನಾರಾಯಣ ಆಳ್ವಾ (60) ಎಂದು ಗುರುತಿಸಲಾಗಿದೆ. ಬೆಳಗ್ಗೆ ವಾಕಿಂಗ್ ಹೋಗಿದ್ದ ಅವರು ನಂತರ ನಾಪತ್ತೆಯಾಗಿದ್ದರು. ಉಳ್ಳಾಲ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.[ಬಸ್ ಡಿಪೋದಲ್ಲಿ ಸೌಲಭ್ಯಗಳಿಲ್ಲ]

Bus owner missing, suicide suspected

ಜಪ್ಪಿನಮೊಗರು ನಿವಾಸಿಯಾದ ನಾರಾಯಣ ಅವರು ಗಣೇಶ್ ಪ್ರಸಾದ್ ಬಸ್‌ನ ಮಾಲೀಕರಾಗಿದ್ದರು. ನೇತ್ರಾವತಿ ಸೇತುವೆ ಮೇಲೆ ಅವರ ಕಾರು ಸಿಕ್ಕಿದೆ. ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಶವಕ್ಕಾಗಿ ಹುಡುಕಾಟ ನಡೆಯುತ್ತಿದೆ.[ಸಾರಿಗೆ ಮುಷ್ಕರ : ನೌಕರರಿಗೆ ಮೂರು ದಿನದ ವೇತನ ಕಡಿತ]

ನಾರಾಯಣ ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗದೆ. ಪಾಂಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.[ಕರ್ನಾಟಕ ಸರ್ಕಾರಕ್ಕೆ ಕೊಡಗಿನ ಬೆಳ್ಳಿಯಪ್ಪನ ಪ್ರಶ್ನೆಗಳು]

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
60 year old Narayana Alva a bus owner is reported to have gone missing since August 10, 2016 morning. Narayana Alva resident of Jeppinamogaru, Mangaluru is suspected to have committed suicide.
Please Wait while comments are loading...