ಮಂಗಳೂರು ಐಟಿ ಕಚೇರಿಗೆ ಕಲ್ಲು, ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕೇಸ್

By: ಕಿರಣ್ ಸಿರ್ಸಿಕರ್
Subscribe to Oneindia Kannada

ಮಂಗಳೂರು, ಆಗಸ್ಟ್ 03 : ರಾಜ್ಯ ಇಂಧನ ಸಚಿವ ಡಿಕೆ ಶಿವಕುಮಾರ್ ಅವರ ಮನೆ ಹಾಗೂ ಕಚೇರಿ ಮೇಲೆ ಐಟಿ ದಾಳಿ ಖಂಡಿಸಿ ಮಂಗಳೂರಿನಲ್ಲಿರವ ಆದಾಯ ತೆರಿಗೆ ಕಚೇರಿಯ ಮೇಲೆ ಕಲ್ಲು ತೂರಿದ್ದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಐಟಿ ದಾಳಿ: ಡಿಕೆಶಿ ಬೆಂಬಲಿಗರಿಂದ ಮಂಗ್ಳೂರು ಆದಾಯ ಕಚೇರಿಗೆ ಕಲ್ಲು

ನಿನ್ನೆ (ಬುಧವಾರ) ಡಿಕೆಶಿ ಸೇರಿದಂತೆ ಅವರ ಸಂಬಂಧಿ ಹಾಗೂ ಆಪ್ತರ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಇದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಅತ್ತಾವರ ಬಳಿ ಇರುವ ಆದಾಯ ತೆರಿಗೆ ಕಚೇರಿ ಮೇಲೆ ಕಲ್ಲು ತೂರಿ ಕಿಟಕಿ ಗಾಜುಗಳನ್ನು ಪುಡಿ ಮಾಡಿದ್ದರು.

Case registered against 11 Congress members for attack on Mangaluru IT office

ಈ ಹಿನ್ನಲೆಯಲ್ಲಿ ಇಲಾಖೆಯ ಸೊತ್ತಿಗೆ ಹಾನಿಯಾದ ಬಗ್ಗೆ ಪಾಂಡೇಶ್ವರ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಈ ನಡುವೆ ಆದಾಯ ತೆರಿಗೆ ಅಧಿಕಾರಿಗಳು ಕೂಡ ಕಚೇರಿಯಲ್ಲಿ ದಾಂಧಲೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಪಾಂಡೇಶ್ವರ ಠಾಣೆಯ ಪೊಲೀಸರು ಹನ್ನೊಂದು ಮಂದಿ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಸಾರ್ವಜನಿಕ ಶಾಂತಿ ನೆಮ್ಮದಿಗೆ ಭಂಗ ಉಂಟು ಮಾಡುವಂತಹ ಅಹಿತಕರ ಘಟನೆಗಳು ಮರುಕಳಿಸದಿರಲಿ ಎಂದು ನಿನ್ನೆ ಮುಂಜಾನೆಯಿಂದಲೇ ಸೆಕ್ಷನ್ ಕೆಪಿ 35 ಅನ್ವಯ ನಿರ್ಬಂಧಕಾಜ್ಞ ವಿಧಿಸಲಾಗಿತ್ತು.

D K Shivakumar, M B Patil, S R Patil, Who Will Become KPCC President? | Oneindia Kannada

ನಿರ್ಬಂಧಕಾಜ್ಞ ನಡುವೆಯೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ದಾಂಧಲೆ ನಡೆಸಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ .ಈ ಕಾನೂನು ಉಲ್ಲಂಘನೆ ಅಡಿಯಲ್ಲಿಯೇ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯ ಕೇಳಿಬರುತ್ತಿದೆ .

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
A case stands registered against 11 members of Youth Congress who attacked the Income Tax (IT) office at Attavar on Wednesday, August 2. in result of IT raid on DK Shivakukar. A sumoto complaint has been registered by Pandeshwara Police.
Please Wait while comments are loading...