ಬಂಟ್ವಾಳದಲ್ಲಿ ಅಕ್ರಮ ಜಾನುವಾರು ಸಾಗಾಟ ಲಾರಿ ಪಲ್ಟಿ , ಜಾನುವಾರು ವಶ

Posted By:
Subscribe to Oneindia Kannada

ಮಂಗಳೂರು, ಫೆಬ್ರವರಿ 12: ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಕಂಟೈನರ್ ಲಾರಿ ಮಗುಚಿ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳದ ವಗ್ಗ ಎಂಬಲ್ಲಿ ಈ ಘಟನೆ ನಡೆದಿದ್ದು ಲಾರಿಯಲ್ಲಿದ್ದ ದನ, ಎಮ್ಮೆ ಸೇರಿದಂತೆ ಎತ್ತುಗಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದುದು ಬೆಳಕಿಗೆ ಬಂದಿದೆ.

ಬಂಟ್ವಾಳ ತಾಲೂಕಿನ ವಗ್ಗ ಅಂಚಿಕಟ್ಟೆ ತಿರುವಿನಲ್ಲಿ ಲಾರಿ ಪಲ್ಟಿಯಾಗಿತ್ತು. ಈ ಲಾರಿಯ ಕಂಟೈನರ್ ಒಳಗೆ 9 ಎತ್ತು, 5 ಎಮ್ಮೆಗಳನ್ನು ಕೂಡಿಹಾಕಿ ಸಾಗಿಸಲಾಗುತ್ತಿತ್ತು ಎಂದು ಹೇಳಲಾಗಿದೆ. ಘಟನೆಯಲ್ಲಿ ಒಂದು ಎತ್ತು ಸಾವನ್ನಪ್ಪಿದ್ದು ಉಳಿದ ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದೆ. ಲಾರಿ ಮಗುಚಿ ಬಿದ್ದ ಹಿನ್ನೆಲೆಯಲ್ಲಿ ಜಾನುವಾರು ಸಾಗಾಟಗಾರರು ಲಾರಿಯನ್ನು ಬಿಟ್ಟು ಪರಾರಿಯಾಗಿದ್ದಾರೆ.

Cattle smuggling lorry over turned in Bantwal, police seizes vehicle

ಅಕ್ರಮ ಜನುವಾರ ಸಾಗಾಟದ ಕುರಿತು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
A container lorry over turned in Bantwal, which is carrying more than 15 cattle. Bantwal police sized the lorry and cattle are rescued.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ