ಮಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರುತ್ತಿದ್ದವರು ಅಂದರ್

Posted By:
Subscribe to Oneindia Kannada

ಮಂಗಳೂರು, ಆಗಸ್ಟ್ 4: ನಗರದ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕೊಂಚಾಡಿ ನಿವಾಸಿ ಲಯನ್ ವೇಗಸ್, ಪಳ್ನೀರ್ ನ ಆಲ್ಮಂಡ್ ಕಾರ್ಕಡ, ಕದ್ರಿ ಕಂಬಳ ನಿವಾಸಿ ಪ್ರದೀಪ್ ಬಂಧಿತ ಆರೋಪಿಗಳು.

ಆರೋಪಿಗಳಿಂದ 1ಕೆಜಿ 200 ಗ್ರಾಂ ಗಾಂಜಾ, ದ್ವಿಚಕ್ರ ವಾಹನ ಹಾಗೂ ಮೂರು ಮೊಬೈಲ್ ಫೋನ್ ಸೇರಿದಂತೆ ಒಟ್ಟು 68,500 ರೂಪಾಯಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

CCB Police Arrested three Ganja peddlers at Kadri, Mangaluru

ಆರೋಪಿಗಳು ಗುರುವಾರ ರಾತ್ರಿ ರಸ್ತೆಯಲ್ಲಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಗಾಂಜಾ ಸಹಿತ ಆರೋಪಿಗಳನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಗಾಂಜಾವನ್ನು ಶಿಕಾರಿಪುರದಿಂದ ಖರೀದಿ ಮಾಡಿ ತಂದಿರುವುದಾಗಿ ಹೇಳಿದ್ದಾರೆ.

ಆರೋಪಿಗಳ ಪೈಕಿ ಲಯನ್ ವೇಗಸ್ ಎಂಬಾತನ ವಿರುದ್ಧ ಹಿಂದೆ ಕಾವೂರು, ಮಂಗಳೂರು ಉತ್ತರ, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ದ್ವಿಚಕ್ರ ವಾಹನ ಕಳವು, ಹಲ್ಲೆ ಪ್ರಕರಣ ಮುಂತಾದ 9 ಪ್ರಕರಣಗಳು ದಾಖಲಾಗಿದೆ.

ನಗರ ಪೊಲೀಸ್ ಕಮಿಷನರ್ ಟಿಆರ್ ಸುರೇಶ್ ಆದೇಶದಂತೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಶಾಂತರಾಜು ಹಾಗೂ ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿ ಹನುಮಂತರಾಯ ಮತ್ತು ಎಸಿಪಿ ಸಿಸಿಬಿಯ ವ್ಯಾಲೆಂಟೈನ್ ಡಿಸೋಜಾ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಇನ್ಸ್ಪೆಕ್ಟರ್ ಸುನೀಲ್ ವೈ ನಾಯಕ್ ಮತ್ತು ಶ್ಯಾಮ್ ಸುಂದರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
The CCB police arrested three Ganja peddlers while they were selling Ganja to students and the public near Kadri, Mangaluru.
Please Wait while comments are loading...