ಮಂಗಳೂರು : ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್

By: ಒನ್ ಇಂಡಿಯಾ ಪ್ರತಿನಿಧಿ
Subscribe to Oneindia Kannada

ಮಂಗಳೂರು, ಸೆಪ್ಟೆಂಬರ್ 10 : ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ನಡೆಸಲಾಗಿದೆ. ಪೊಲೀಸರು ಅಮಾಯಕ ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಆಗ ಲಾಠಿ ಪ್ರಹಾರ ನಡೆಸಲಾಗಿದೆ.

ವಳಚ್ಚಿಲ್ ಪದವಿನ ಶೀನಿವಾಸ ಕಾಲೇಜಿನ ಬಿ ಫಾರ್ಮಾ ವಿಭಾಗದ ವಿದ್ಯಾರ್ಥಿಗಳು ಇಂದು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದರು. ಕಾಲೇಜಿನ ಮೂವರು ವಿದ್ಯಾರ್ಥಿಗಳನ್ನು ragging ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದ್ದು, ಅದರ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿತ್ತು.

student

ಅಮಾಯಕ ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ಘೋಷಣೆ ಕೂಗುತ್ತಾ ವಿದ್ಯಾರ್ಥಿಗಳು ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. [ಮಂಗಳೂರು : ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿ ನಿಗೂಢ ಸಾವು]

ಲಾಠಿ ಚಾರ್ಜ್ ವೇಳೆ ಹಿಫಝ್ ಮತ್ತು ಮುಝಮ್ಮಿಲ್ ಎಂಬವರು ಗಾಯಗೊಂಡಿದ್ದು ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.[ಸಂತ ಅಲೋಶಿಯಸ್ ಕಾಲೇಜು ವಿವಾದ, ಕಿಡಿಗೇಡಿಗಳ ಕೃತ್ಯವೇ?]

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Campus Front of India (CFI) students who gheroed Mangaluru rural police station, on Saturday September 10, were lathi charged by police. Students protesting the arrest of a student at Srinivasa College.
Please Wait while comments are loading...