ಕರಾವಳಿಯಲ್ಲಿ ಹೆಣ ಇಟ್ಕೊಂಡು ರಾಜಕೀಯ ಮಾಡ್ತಿದ್ದಾರೆ: ಸಿಎಂ ಕಿಡಿ

Posted By:
Subscribe to Oneindia Kannada

ಮಂಗಳೂರು, ಜನವರಿ 7: "ಕರಾವಳಿಯಲ್ಲಿ ಹೆಣ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ," ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.

ಬೆಳ್ತಂಗಡಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಚಾಲನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಅವರು, ಅಬ್ದುಲ್ ಬಷೀರ್ ಸಾವಿನ ಹಿನ್ನಲೆಯಲ್ಲಿ ಮಾಧ್ಯಮಗಳಿಗೆ ಈ ಪ್ರತಿಕ್ರಿಯೆ ನೀಡಿದರು.

ದುಷ್ಕರ್ಮಿಗಳ ದಾಳಿಗೆ ಒಳಗಾಗಿದ್ದ ಅಬ್ದುಲ್ ಬಷೀರ್ ನಿಧನ

ಡಿಸೆಂಬರ್ 3ರಂದು ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಕೊಲೆಯಾಗಿದ್ದರು. ಅದೇ ದಿನ ಅಬ್ದುಲ್ ಬಷೀರ್ ಮೇಲೆ ನಾಲ್ವರು ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಷೀರ್ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದರು.

Chief Minister Siddaramaiah condemns Abdul Basheer's death

ಇದೇ ಸಂದರ್ಭದಲ್ಲಿ ಸಿಎಂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಮುಖ್ಯಮಂತ್ರಿ ಹೋದಲೆಲ್ಲಾ ಹೆಣ ಉರುಳುತ್ತದೆ ಎಂಬ ಬಿಜೆಪಿಯ ಟೀಕೆಗೆ ಪ್ರತಿಕ್ರಿಯೆ ನೀಡಿರುವ ಅವರು, "ಇವತ್ತು ಬಷೀರ್ ತೀರಿ ಹೋಗಿದ್ದಾರೆ. ಇದಕ್ಕೆ ಏನು ಹೇಳುತ್ತೀರಿ? ಬಿಜೆಪಿಯವರಿಗೆ ಟೀಕೆ ಮಾಡುವುದೇ ಕೆಲಸ. ಹತ್ಯೆ ಮಾಡುವುದು ಮನುಷ್ಯತ್ವ ವಿರೋಧಿ," ಎಂದು ಹೇಳಿದರು.

ಬಷೀರ್ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುತ್ತೇವೆ ಎಂದು ಹೇಳಿದರು ಮುಖ್ಯಮಂತ್ರಿಗಳು, "ಬಷೀರ್ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡುತ್ತೇವೆ," ಎಂದು ಭರವಸೆ ನೀಡಿದರು.

ಮಂಗಳೂರಲ್ಲಿ ಬಶೀರ್ ಹಲ್ಲೆ ಪ್ರಕರಣ: ನಾಲ್ವರ ಬಂಧನ

ಇದೇ ಸಂದರ್ಭದಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, "ಜಿಲ್ಲೆಯಲ್ಲಿ ನಡೆಯುತ್ತಿರುವ ಈ ಹತ್ಯೆಗಳಲ್ಲಿ ಕಾಣದ ಕೈಗಳ ಕೈವಾಡ ಇದೆ. ಚುನಾವಣೆ ಹಿನ್ನೆಲೆಯಲ್ಲಿ ಇಂತಹ ಕೃತ್ಯ ನಡೆಯುತ್ತಿದೆ," ಎಂದು ಆಕ್ರೋಶ ವ್ಯಕ್ತಪಡಿಸಿದರು.

Chief Minister Siddaramaiah condemns Abdul Basheer's death

ಅಬ್ದುಲ್ ಬಷೀರ್ ಅವರ ಸಾವಿಗೆ ಸಂತಾಪ ಸೂಚಿಸಿದ ಅವರು, "ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳ ಮೂಲ ಹುಡುಕುತ್ತೇವೆ. ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಲು ಈ ಕೃತ್ಯ ಎಸಗಲಾಗುತ್ತಿದೆ," ಎಂದು ಆರೋಪಿಸಿದರು.

ಜಿಲ್ಲೆಯಲ್ಲಿ ನಡೆದಿರುವ ಹತ್ಯೆಯಲ್ಲಿ ಕಾಂಗ್ರೆಸ್ ಪಾತ್ರ ಇಲ್ಲ ಎಂದು ಹೇಳಿದ ಅವರು ಸಂಘ ಪರಿವಾದವರ ಪ್ರಚೋದನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಈ ಘಟನೆ ನಡೆಯುತ್ತಿದೆ ಎಂದು ಆರೋಪಿಸಿದರು. ಸಿಎಂ ಕಾರ್ಯಕ್ರಮದ ಬಳಿಕ ಬಷೀರ್ ಅವರ ಮನೆಗೆ ಭೇಟಿ ನೀಡುತ್ತೇನೆ ಎಂದು ಅವರು ಸ್ಪಷ್ಟಪಡಿಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Chief Minister Siddaramaiah condoled the death of Abdul Basheer, who died today. Speaking to media in Belthangady, Mangaluru, he condemned Bashir's murder.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ