ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಸ್ವಾಮಿ ಒಣದ್ರಾಕ್ಷಿ-ಅಕ್ಕಿ ತುಲಾಭಾರ

|
Google Oneindia Kannada News

Recommended Video

ಕೆಟ್ಟ ದೃಷ್ಟಿಯಿಂದ ತಪ್ಪಿಸಿಕೊಳ್ಳಲು ಕುಮಾರಸ್ವಾಮಿ ದೇವರ ಮೊರೆ ಹೋಗಿದ್ದಾರೆ..!

ಮಂಗಳೂರು, ಆಗಸ್ಟ್ 14: ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಂಗಳವಾರ ಕುಟುಂಬ ಸಮೇತರಾಗಿ ಭೇಟಿ ನೀಡಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಅಕ್ಕಿ- ಬೆಲ್ಲ, ಒಣದ್ರಾಕ್ಷಿಯಿಂದ ತುಲಾಭಾರ ಸೇವೆ ಸಲ್ಲಿಸಿದರು. ಅವರ ಜತೆಗೆ ತಂದೆ ಎಚ್.ಡಿ.ದೇವೆಗೌಡ ಹಾಗೂ ತಾಯಿ ಚನ್ನಮ್ಮ ಹಾಗೂ ಪತ್ನಿ ಅನಿತಾ ಸಹ ಇದ್ದರು.

ಇದೇ ವೇಳೆ ಎಚ್.ಡಿ.ದೇವೇಗೌಡರು ಆಶ್ಲೇಷ ಬಲಿ ಸೇವೆ ನೆರವೇರಿಸಿದರು. ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಕುಮಾರಸ್ವಾಮಿ, ನಾಡಿನ ಸುಭಿಕ್ಷೆಗಾಗಿ ಪ್ರಾರ್ಥನೆ ಮಾಡಲು ದೇವಸ್ಥಾನಕ್ಕೆ ಬಂದಿದ್ದೇನೆ. ಇನ್ನು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪೂಜೆ ಮಾಡಿಸುತ್ತಿರುವುದು ನನ್ನ ಮೇಲೆ ಬಿದ್ದಿರುವ ಕೆಟ್ಟ ದೃಷ್ಟಿಯ ನಿವಾರಣೆಗಾಗಿ ಎಂದು ಹೇಳಿದ್ದಾರೆ.

CM Kumaraswamy and family visited Kukke Subrhamanya, offered prayer

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಎಚ್.ಡಿ.ಕುಮಾರಸ್ವಾಮಿ ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಎಚ್.ಡಿ.ಕುಮಾರಸ್ವಾಮಿ

ಇದಕ್ಕೂ ಮುನ್ನ ಸೋಮವಾರದಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದರು. ಅಲ್ಲಿ ಮಂಜುನಾಥನಿಗೆ ಶತರುದ್ರಾಭಿಷೇಕ ಹಾಗೂ ವಿಶೇಷ ಪೂಜೆಯ ಸೇವೆ ಸಲ್ಲಿಸಿದರು. ಅಂದ ಹಾಗೆ, ಕುಮಾರಸ್ವಾಮಿ ಅವರು ಮೈತ್ರಿ ಸರಕಾರದಲ್ಲಿ ಮುಖ್ಯಮಂತ್ರಿ ಆದ ನಂತರ ನಲವತ್ತಕ್ಕೂ ಹೆಚ್ಚು ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ. ಅವುಗಳಲ್ಲಿ ರಾಜ್ಯ ಹಾಗೂ ಹೊರ ರಾಜ್ಯದ ದೇಗುಲಗಳು ಕೂಡ ಸೇರಿವೆ.

English summary
Chief Minister H.D. Kumaraswamy along with his family visited Kukke Subrhamanya temple on Tuesday and offered special Pooja to lord Subrhamanya. H.D.Kumaraswamy said that, due to evil eye he is offering prayer in Kukke Subrhamanya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X