ಸಂಸದ ಕಟೀಲ್ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಕೋರ್ಟ್ ಸೂಚನೆ

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು. ಜನವರಿ. 04 : ಕೊಣಾಜೆ ಪೊಲೀಸ್ ಠಾಣೆ ಮುಂಭಾಗ ಭಾನುವಾರ ನಡೆದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಸಂಸದ ನಳಿನ್ ಕುಮಾರ್‌ ಕಟೀಲ್ ವಿರುದ್ಧ ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ಎಫ್‌ಐಆರ್ ದಾಖಲಾಗಿದೆ.

ಮಂಗಳೂರು ಜಿಲ್ಲಾ ನ್ಯಾಯಾಲಯ ಕಟೀಲ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವಂತೆ ಕೊಣಾಜೆ ಪೊಲೀಸರಿಗೆ ಸೂಚನೆ ನೀಡಿದೆ. ಈ ಪ್ರಕರಣ ಐಪಿಸಿ ಸೆ. 506ರ ಅಡಿ ಬರುವುದರಿಂದ ನಾನ್‌ ಕಾಗ್ನಿಸಿಬಲ್ ಅಪರಾಧ ಆಗಿತ್ತು. ಇಂತಹ ಪ್ರಕರಣಗಳಲ್ಲಿ ಪೊಲೀಸರಿಗೆ ನೇರವಾಗಿ ತನಿಖೆ ಮಾಡಲು ಅಧಿಕಾರ ಇರುವುದಿಲ್ಲ.['ಬೆಂಕಿ' ಹೇಳಿಕೆಗೆ ಕ್ಷಮೆ ಕೋರಿದ ಸಂಸದ ನಳಿನ್ ಕುಮಾರ್]

Complaint has been logged in Konaje police station against MP Nalin Kumar Kateel

ಹಾಗಾಗಿ ಮಂಗಳವಾರ ಬೆಳಗ್ಗೆ ಪೊಲೀಸರು ನಾನ್‌ ಕಾಗ್ನಿಸಿಬಲ್ ವರದಿಯನ್ನು ಮಂಗಳೂರಿನ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಮಂಗಳವಾರ ಸಂಜೆ ನ್ಯಾಯಾಲಯದ ಸೂಚನೆಯಂತೆ ಪೊಲೀಸರು ಪ್ರಕರಣದ ಕುರಿತು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಕಾನೂನಿನ ಅಡಿಯಲ್ಲಿ ಎಲ್ಲರೂ ಸಮಾನರು. ಈ ಪ್ರಕರಣದ ಕುರಿತು ಕಾನೂನಾತ್ಮಕವಾಗಿ ಏನು ಮಾಡಬೇಕೋ ಅದನ್ನು ಮಾಡುತ್ತೇವೆ ಎಂದು ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಚಂದ್ರಶೇಖರ್, ನಮ್ಮ ' ಒನ್ ಇಂಡಿಯಾ' ಕ್ಕೆ ಮಾಹಿತಿ ನೀಡಿದ್ದಾರೆ[ದಕ್ಷಿಣ ಕನ್ನಡಕ್ಕೆ ಬೆಂಕಿ ಹಚ್ಚುತ್ತೇವೆ: ಸಂಸದ ಕಟೀಲ್]

ಕಾರ್ತಿಕ್‌ ರಾಜ್‌ ಎಂಬ ಯುವಕನ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ ಭಾನುವಾರ ಬಿಜೆಪಿ ವತಿಯಿಂದ ಠಾಣೆಯ ಎದುರು ಪ್ರತಿಭಟನೆ ನಡೆಸಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡುತ್ತಾ ಪೊಲೀಸರ ವಿರುದ್ಧ ಹರಿಹಾಯ್ದಿದ್ದ ನಳಿನ್ ಕುಮಾರ್‌, 'ಹತ್ತು ದಿನಗಳೊಳಗೆ ಆರೋಪಿಗಳನ್ನು ಬಂಧಿಸದಿದ್ದರೆ ಇಡೀ ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಚ್ಚಲು ಬಿಜೆಪಿ ಕಾರ್ಯಕರ್ತರಿಗೆ ಸಾಧ್ಯವಿದೆ' ಎಂದು ನಳಿನ್ ಕುಮಾರ್ ಅವರು ಹೇಳಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
A complaint has been logged in Konaje police station on Tuesday, against BJP MP from dakshina kannada Nalin Kumar Kateel over his statement that BJP workers were capable of 'setting the district on fire.'
Please Wait while comments are loading...