ಸಿದ್ದರಾಮಯ್ಯ ರಾಜೀನಾಮೆ ನೀಡ್ಲಿ, ಪರಂ ಸಿಎಂ ಆಗಲಿ: ಪೂಜಾರಿ

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಅಕ್ಟೋಬರ್ 31: ರಾಜ್ಯದಲ್ಲಿ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬರಬೇಕಾದರೆ ಮೊದಲಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಒಳಿತು. ಅವರ ಬದಲಿಗೆ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ದಲಿತ ನಾಯಕ ಡಾ.ಜಿ.ಪರಮೇಶ್ವರ್‌ರನ್ನು ಆಯ್ಕೆಮಾಡುವ ಬಗ್ಗೆ ತೀರ್ಮಾನಿಸಬೇಕು ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಜನಾರ್ದನ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಜನಾರ್ಧನ ಪೂಜಾರಿ, ಟಿ.ವಿ. ಮಾಧ್ಯಮ ಸಂಸ್ಥೆಯೊಂದು ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಮುಂಬರುವ ಚುನಾವಣೆಯಲ್ಲಿ ರಾಜ್ಯ ಸರಕಾರ ಅಧಿಕಾರ ಕಳೆದುಕೊಳ್ಳಲಿದೆ ಎನ್ನುವುದಾಗಿ ವರದಿ ಮಾಡಿದೆ.['ಸಿದ್ದರಾಮಯ್ಯನವರೇ ನಿಮ್ಮ ಕುರ್ಚಿ ಅಲುಗಾಡುತ್ತಿದೆ']

ಕಾಂಗ್ರೆಸ್ ಮುಖಂಡರು ಈ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು . ಈಗಾಗಲೇ ಸಾರ್ವಜನಿಕ ವಲಯದಿಂದಲೂ ಕೂಡಾ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರ ಹಿಡಿಯುವುದು ಕಷ್ಟ ಎಂಬ ಅಭಿಪ್ರಾಯ ಕೇಳಿಬರುತ್ತಿದೆ.

Mangaluru: Congress can come back to power if Parameshwar becomes CM- Poojary

ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯರ ಬದಲಿಗೆ ಡಾ.ಜಿ.ಪರಮೇಶ್ವರ್‌ರನ್ನು ಆಯ್ಕೆ ಮಾಡಿದರೆ ರಾಜ್ಯದಲ್ಲಿ ಪ್ರಥಮ ಬಾರಿಗೆ ಮುಖ್ಯಮಂತ್ರಿ ಸ್ಥಾನ ದಲಿತರಿಗೆ ನೀಡಿದಂತಾಗುತ್ತದೆ. ಶಾಸಕರಿಗೆ ನಿಗಮ ಮಂಡಳಿಯ ಸ್ಥಾನ ನೀಡಲು ಹೊರಟಿರುವುದು ಸರಿಯಲ್ಲ. ಇದರಿಂದ ಪಕ್ಷದ ಕಾರ್ಯಕರ್ತರನ್ನು ನಿರ್ಲಕ್ಷಿಸಿದಂತಾಗುತ್ತದೆ ಎಂದು ಬಿ.ಜನಾರ್ದನ ಪೂಜಾರಿ ಹೇಳಿದರು.

ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ರಾಜ್ಯದ ಕಾಂಗ್ರೆಸ್ ವಲಯದಲ್ಲಿ 20 ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನುವುದಾಗಿ ಕೆಲ ಮಾಧ್ಯಮಗಳ ಮೂಲಕ ವರದಿಯಾಗಿದೆ. [ಜನಾರ್ದನ ಪೂಜಾರಿ ವಿರುದ್ಧ ಕಾಂಗ್ರೆಸ್ ಹೈಕಮಾಂಡ್‌ಗೆ ದೂರು]

ಈ ರೀತಿ ಮುಂದುವರೆದರೆ ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರ ಪಕ್ಷ ಕಳೆದುಕೊಳ್ಳಲಿದೆ. ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟರೆ ಒಳಿತು ಎಂದು ಪೂಜಾರಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
If the MLAs and the high command make home minister Dr Parameshwar, the chief minister of Karnataka and only then the Congress will be back to power in the next legislative assembly elections said Janardhan Poojary
Please Wait while comments are loading...