ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಳಸಾ-ಬಂಡೂರಿ: ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು?

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು,ಜುಲೈ, 16: ಮಹಾದಾಯಿ ಯೋಜನೆ ಕುರಿತಂತೆ ಕರ್ನಾಟಕಕ್ಕೆ ನ್ಯಾಯ ಒದಗಿಸುವಂತೆ ಕೋರಿ ಕಳೆದ ಒಂದು ವರ್ಷದಿಂದ ಕೇಂದ್ರ ಸರಕಾರವನ್ನು ಒತ್ತಾಯಿಸಲಾಗುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ಸರಕಾರ ಸಂಪೂರ್ಣ ನಿರ್ಲಕ್ಷ ವಹಿಸಿದೆ ಎಂದು ಲೋಕಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಕಂಕನಾಡಿ ಕರಾವಳಿ ವೃತ್ತ ರಸ್ತೆಗೆ ದಿ. ಬ್ಲೇಸಿಯಸ್ ಎಂ.ಡಿಸೋಜಾ ನಾಮಕರಣ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭ ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು.[ಕಳಸಾ-ಬಂಡೂರಿ ಹೋರಾಟ: ಉತ್ತರ ಕರ್ನಾಟಕ ಸ್ತಬ್ಧ]

karnataka

ಕೃಷಿ ಬಗ್ಗೆ ಅಲ್ಲದಿದ್ದರೂ ಕನಿಷ್ಠ ಕುಡಿಯುವ ನೀರಿಗಾದರೂ ಅವಕಾಶ ಒದಗಿಸಬಹುದಿತ್ತು. ಆದರೆ ಹೋರಾಟಕ್ಕೂ ಕನಿಷ್ಠ ಸ್ಪಂದನೆ ಮಾಡದಿರುವುದು ಬೇಸರದ ಸಂಗತಿ. ಮುಂದಿನ ಬಾರಿಯೂ ಸಹ ಸಂಸತ್ತಿನಲ್ಲೂ ಇದನ್ನು ಪ್ರಸ್ತಾಪಿಸಲಾಗುವುದು ಎಂದು ಹೇಳಿದರು.

ರಾಜ್ಯವನ್ನು ಪ್ರತಿನಿಧಿಸುವ ದಲ್ಲಿರುವ ಕೇಂದ್ರದ ಸಚಿವರು ಕೂಡಾ ದನಿಗೂಡಿಸಬೇಕು. ಯುಪಿಎ ಸರಕಾರ ಅಧಿಕಾರದಲ್ಲಿದ್ದಾಗ ಕೃಷ್ಣಾ ನದಿ ಯೋಜನೆ ವಿವಾದವನ್ನು ಸಮರ್ಪಕವಾಗಿ ಬಗೆಹರಿಸಲಾಗಿತ್ತು ಎಂದವರು ಹೇಳಿದರು.[ಏನಿದು ಕಳಸಾ-ಬಂಡೂರಿ ಯೋಜನೆ?]

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸುದ್ದಿಗಾರರ ಪ್ರಶ್ನೆಗೆ, ಸದನದಲ್ಲಿ ಈಗಾಗಲೇ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಹೊರಗಡೆ ಅದರ ಬಗ್ಗೆ ಮಾತನಾಡುವುದು ಸರಿಯಲ್ಲ. ಮುಖ್ಯಮಂತ್ರಿಯವರ ಮಾತಿಗೆ ತಾವು ಬದ್ಧ ಎಂದು ಅವರು, ಜನಾರ್ದನ ಪೂಜಾರಿಯವರ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.

English summary
PM Narendra Modi should take solution steps on Kalasa Banduri nala project Leader of Congress in Lok Sabha, Mallikarjun Kharge said on 16, July 2016, at Mangaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X