ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಕಾಂಗ್ರೆಸ್‌ ಮುಖಂಡರಿಂದ ದೂರು

Posted By:
Subscribe to Oneindia Kannada

ಮಂಗಳೂರು, ಏಪ್ರಿಲ್ 8: ಸಚಿವ ಯು.ಟಿ ಖಾದರ್ ಪ್ರವೇಶಿಸಿದ ದೇವಾಲಯ ಹಾಗು ದೈವಸ್ಥಾನಗಳಲ್ಲಿ ಇನ್ನೊಮ್ಮೆ ಬ್ರಹ್ಮಕಲಶ ನಡೆಸಬೇಕು ಎಂದು ಭಾಷಣ ಮಾಡಿದ್ದ ಆರ್.ಎಸ್.ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಸಂಕಷ್ಟ ಎದುರಾಗಿದೆ.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಆರ್.ಎಸ್.ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯು ಚುನಾವಣಾಧಿಕಾರಿಯವರಿಗೆ ದೂರು ನೀಡಿದೆ.

'ಖಾದರ್ ಪ್ರವೇಶಿಸಿದ ದೇವಾಲಯಕ್ಕೆ ಮತ್ತೊಮ್ಮೆ ಬ್ರಹ್ಮ ಕಲಶ ಆಗಲೇಬೇಕು'

ಚುನಾವಣಾಧಿಕಾರಿ ವೈಶಾಲಿ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮುಖಂಡರು ಶನಿವಾರ ಡಾ . ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ದ ದೂರು ಸಲ್ಲಿಸಿದರು. ಬಂಟ್ವಾಳದ ಕೈರಂಗಳದಲ್ಲಿರುವ ಅಮೃತಧಾರಾ ಗೋಶಾಲೆಯ ಅಧ್ಯಕ್ಷ ರಾಜಾರಾಂ ಭಟ್ ಆಯೋಜಿಸಿದ್ದ ಉಪವಾಸ ಸತ್ಯಾಗ್ರಹ ಪ್ರತಿಭಟನೆಯಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಕೋಮು ದ್ವೇಷದ ಭಾಷಣ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Congress leaders lodges complaint against RSS leader Dr .Kalladka Prabhakara Bhat

ಜಿಲ್ಲೆಯಲ್ಲಿ ಶಾಂತಿ ಕದಡುವ ಪ್ರಯತ್ನ ನಡೆಸಲಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಚುನಾವಣೆ ಮುಗಿಯುವವರೆಗೆ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸಬೇಕು. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಪ್ರಕರಣ ದಾಖಲಿಸಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಒತ್ತಾಯಿಸಿದ್ದಾರೆ.

"ಸಚಿವ ಯು.ಟಿ. ಖಾದರ್ ಎಂಬ ಕೊಳಕು ಮನುಷ್ಯ ಅಂತಹ ಗೋಮಾಂಸ ಭಕ್ಷಣೆ ಮಾಡುವಂತಹ ವ್ಯಕ್ತಿಯನ್ನು ಪವಿತ್ರ ದೇವಾಲಯ ಹಾಗೂ ದೈವಸ್ಥಾನಕ್ಕೆ ಕರೆಸಿ ಪ್ರಸಾದ ನೀಡುತ್ತಿರುವುದು ಎಷ್ಟು ಸರಿ?" ಎಂದು ಡಾ .ಕಲ್ಲಡ್ಕ ಪ್ರಭಾಕರ ಭಟ್ ಪ್ರಶ್ನಿಸಿದ್ದರು. "ಖಾದರ್ ಪ್ರವೇಶಿಸಿದ ದೇವಾಲಯ ಹಾಗೂ ದೈವಸ್ಥಾನಗಳಲ್ಲಿ ಇನ್ನೊಮ್ಮೆ ಬ್ರಹ್ಮಕಲಶ ನಡೆಸಬೇಕು," ಎಂದು ಹೇಳಿದ್ದರು. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Dakshina Kannada Congress leaders lodged complaint against RSS leader Dr. Kalladka Prabhakara Bhat for violating of model code of conduct in Bantwal.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ