ಚಿತ್ರಗಳು : ದಕ್ಷಿಣ ಕನ್ನಡ ಬಂದ್‌ಗೆ ಭಾರೀ ಬೆಂಬಲ

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಮೇ 19 : ಎತ್ತಿನ ಹೊಳೆ ಯೋಜನೆ ವಿರೋಧಿಸಿ ಕರೆ ನೀಡಲಾಗಿರುವ ದಕ್ಷಿಣ ಕನ್ನಡ ಜಿಲ್ಲಾ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿ ಗುರುವಾರ ಸ್ವಯಂ ಪ್ರೇರಿತ ಜಿಲ್ಲಾ ಬಂದ್‌ಗೆ ಕರೆ ನೀಡಿದೆ.

ಮುಂಜಾನೆ 5 ಗಂಟೆಯಿಂದಲೇ ತೊಕ್ಕೊಟ್ಟು, ಪಂಪ್ವೆಲ್ ವೃತ್ತ, ಉಳ್ಳಾಲ, ಎಕ್ಕೂರಿನಲ್ಲಿ ಟಯರ್‌ಗಳಿಗೆ ಬೆಂಕಿ ಹಚ್ಚಿ, ವಾಹನಗಳ ಸಂಚಾರಕ್ಕೆ ಅಡ್ಡಿ ಪಡಿಸಲಾಗಿದೆ. ಪೊಲೀಸರು ಅದನ್ನು ತೆರವುಗೊಳಿಸಿ, ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. [ದಕ್ಷಿಣ ಕನ್ನಡ ಬಂದ್, ಯಾಕೆ ಏನು ಎತ್ತ?]

dakshina kannada

ಬಂದ್ ಕರೆಗೆ ಸ್ಪಂದಿಸಿರುವ ಬಸ್ ಚಾಲಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಇದರಿಂದಾಗಿ ಖಾಸಗಿ ಬಸ್ ಸಂಚಾರ ಸ್ಥಗಿತಗೊಂಡಿದೆ. ಮಂಗಳೂರು ನಗರದಲ್ಲಿ ಜನ ಸಂಚಾರ ವಿರಳವಾಗಿದ್ದು ಅಂಗಡಿಗಳು ಮುಚ್ಚಿವೆ. ಜಾತಿ ಮತದ ಭೇದವಿಲ್ಲದೆ ಎಲ್ಲಾ ವರ್ಗದವರು ಬಂದ್‌ಗೆ ಬೆಂಬಲ ಕೊಟ್ಟಿದ್ದಾರೆ. ['ಎತ್ತು' ಏರಿಗೆ 'ಹೊಳೆ' ನೀರಿಗೆ ಇದೇ ಎತ್ತಿನಹೊಳೆ ಯೋಜನೆ]


-
-
-
-

ಮಂಗಳೂರಿನ ನಂತೂರ್ ಸರ್ಕಲ್‌‌‌‌‌ನಲ್ಲಿ ರಸ್ತೆ ತಡೆ ಮತ್ತು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖಾಸಗಿ ಬಸ್‌‌‌ಗಳು ಸಹ ಬಂದ್‌‌ಗೆ ಸಂಪೂರ್ಣ ಬೆಂಬಲ ಘೋಷಿಸಿವೆ. ವಿವಿಧ ಸಂಘ ಸಂಸ್ಥೆಗಳು, ವಿದ್ಯಾ ಸಂಸ್ಥೆಗಳು, ಐಟಿ ಕಂಪನಿಗಳು ಬೆಂಬಲಿಸಿವೆ. ಮಂಗಳೂರು ಬೈ ಸೈಕಲ್ ಕ್ಲಬ್‌ ಸಹ ಬಂದ್‌ಗೆ ಬೆಂಬಲ ನೀಡಿದೆ. [ನೀರಿನ ಅಭಾವ, ನೇತ್ರಾವತಿ ನದಿಗೆ ಕಾವಲು!]

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Dakshina Kannada bandh call received huge support. Netravati Samrakshana Samiti called for Dakshina Kannada bandh on May 19, 2016 to protest against Yettinahole drinking water project.
Please Wait while comments are loading...