ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ವರ್ಗಾವಣೆ

By: ಒನ್ ಇಂಡಿಯಾ ಪ್ರತಿನಿಧಿ
Subscribe to Oneindia Kannada

ಮಂಗಳೂರು, ಜುಲೈ 22 : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಡಾ.ಕೆ.ಜಿ.ಜಗದೀಶ್ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಗುರುವಾರ ಕರ್ನಾಟಕ ಸರ್ಕಾರ 24 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಕೆ.ಜಿ.ಜಗದೀಶ್ ಅವರನ್ನು ನೂತನ ಜಿಲ್ಲಾಧಿಕಾರಿಗಳಾಗಿ ನೇಮಿಸಲಾಗಿದೆ.[24 ಐಎಎಸ್ ಅಧಿಕಾರಿಗಳ ವರ್ಗಾವಣೆ]

Dakshina Kannada DC AB Ibrahim transferred

ಮೊದಲು ಕೆಎಎಸ್ ಅಧಿಕಾರಿಯಾಗಿದ್ದ ಎ.ಬಿ.ಇಬ್ರಾಹಿಂ ಅವರು ನಂತರ ಐಎಎಸ್ ಅಧಿಕಾರಿಯಾಗಿ ಬಡ್ತಿ ಪಡೆದಿದ್ದರು. 2013ರ ಡಿಸೆಂಬರ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಅವರು ಅಧಿಕಾರ ವಹಿಸಿಕೊಂಡಿದ್ದರು. ಎ.ಬಿ.ಇಬ್ರಾಹಿಂ ಅವರನ್ನು ಸಾರಿಗೆ ಮತ್ತು ರಸ್ತೆ ಸುರಕ್ಷತಾ ಇಲಾಖೆ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.[ಉಡುಪಿಗೆ ನೂತನ ಜಿಲ್ಲಾಧಿಕಾರಿ ನೇಮಕ]

ಜಗದೀಶ್ ಪರಿಚಯ : ನೂತನ ಜಿಲ್ಲಾಧಿಕಾರಿಯಾಗಿ ನೇಮಕವಾಗಿರುವ ಡಾ.ಕೆ.ಜಿ.ಜಗದೀಶ್ ಅವರು 2005ನೇ ಬ್ಯಾಚ್‌ ಐಎಎಸ್ ಅಧಿಕಾರಿ. ಈ ಹಿಂದೆ ಅವರು ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು.[ಮುಸ್ಲಿಂ ಡಿಸಿ ಹೆಸರು ಮತ್ತು ಪುತ್ತೂರು ದೇವಾಲಯದ ವಿವಾದ]

ದೊಡ್ಡ ಸುದ್ದಿಯಾಗಿತ್ತು : 2016ರ ಮಾರ್ಚ್‌ನಲ್ಲಿ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ದೊಡ್ಡ ಸುದ್ದಿ ಮಾಡಿದ್ದರು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಎ.ಬಿ.ಇಬ್ರಾಹಿಂ ಹೆಸರು ಹಾಕಲಾಗಿತ್ತು. ಹಿಂದೂಯೇತರರಾದ ಜಿಲ್ಲಾಧಿಕಾರಿಯನ್ನು ಜಾತ್ರೆಗೆ ಕರೆಯುವುದು ಸರಿಯಲ್ಲ. ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗಿದೆ ಎಂಬುದು ವಿವಾದಕ್ಕೆ ಕಾರಣವಾಗಿತ್ತು.[ಬಗೆಹರಿದ ಪುತ್ತೂರು ಮಹಾಲಿಂಗೇಶ್ವರ ಜಾತ್ರೆ ವಿವಾದ]

ab Ibrahim

ಈ ಬಗ್ಗೆ ಕರ್ನಾಟಕ ಹೈಕೋರ್ಟ್‌ಗೂ ಅರ್ಜಿ ಸಲ್ಲಿಕೆಯಾಗಿತ್ತು. ಜಾತ್ರೆಯಲ್ಲಿ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ಪಾಲ್ಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿತ್ತು ಮತ್ತು ಜಿಲ್ಲಾಧಿಕಾರಿಗಳ ಹೆಸರಿಲ್ಲದ ಹೊಸ ಆಮಂತ್ರಣ ಪತ್ರಿಕೆಯನ್ನು ಮುದ್ರಿಸುವಂತೆ ಸೂಚಿಸಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Dakshina Kannada Deputy Commissioner A.B. Ibrahim transferred and posted as Transport Commissioner. Dr.K.G. Jagadeesh appointed as the new deputy commissioner.
Please Wait while comments are loading...