ಶಶಿಕಾಂತ್ ಸೆಂಥಿಲ್ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ

Posted By:
Subscribe to Oneindia Kannada

ಮಂಗಳೂರು, ಅಕ್ಟೋಬರ್ 11: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಕೆ ಜಿ ಜಗದೀಶ್ ರನ್ನು ಏಕಾಏಕಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದ ಶಶಿಕಾಂತ್ ಸೆಂಥಿಲ್ ಅವರನ್ನು ರಾಜ್ಯ ಸರಕಾರ ನೇಮಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿರುವ ಶಶಿಕಾಂತ್ ಸೆಂಥಿಲ್ 2009 ಐಎಎಸ್ ಕೇಡರ್ ನ ಅಧಿಕಾರಿಯಾಗಿದ್ದಾರೆ .

Dakshina Kannada DC Dr. K. G. Jagadeesh has been transferred

ದಕ್ಷಿಣ ಕನ್ನಡದಿಂದ ವರ್ಗಾವಣೆ ಗೊಂಡಿರುವ ಡಾ. ಕೆ. ಜಿ ಜಗದೀಶ್ ಅವರನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರನ್ನಾಗಿ ಸರ್ಕಾರ ನಿಯುಕ್ತಿಗೊಳಿಸಿದೆ.

ನಿರ್ಗಮನ ಜಿಲ್ಲಾಧಿಕಾರಿ ಜಗದೀಶ ಅವರು 2016 ಜುಲೈ ತಿಂಗಳಿನಲ್ಲಿ ದ.ಕ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. 14 ತಿಂಗಳುಗಳ ಕಾಲ ಜಿಲ್ಲಾಧಿಕಾರಿಯಾಗಿದ್ದ ಡಾ.ಜಗದೀಶ್ ಪ್ರಚಾರದಿಂದ ದೂರವೇ ಉಳಿದು ತಮ್ಮ ಕಟ್ಟುನಿಟ್ಟಿನ ಆಡಳಿತದಿಂದ ಜನರ ಮನ ಗೆದ್ದಿದ್ಧರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
District collector of Dakshina Kannada Dr. K. G. Jagadeesh has been transferred as the director of Department of Mines and Geology. IAS officer Sasikanth Senthil to replace him as a new DC for DK district.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ