ದೀಪಕ್ ಹತ್ಯೆ: ಮಂಗಳೂರಿಗೆ ಎಡಿಜಿಪಿ ಕಮಲ್‌ ಪಂತ್ ದೌಡು, ಬಿಗಿ ಬಂದೋಬಸ್ತ್

Subscribe to Oneindia Kannada

ಮಂಗಳೂರು, ಜನವರಿ 3: ಇಂದು ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ನಡೆದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಮಂಗಳೂರಲ್ಲಿ ದೀಪಕ್ ಹತ್ಯೆ: ಚಿತ್ರಗಳಲ್ಲಿ ಪ್ರಕ್ಷುಬ್ಧ ಕರಾವಳಿ

ಈ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡದಂತೆ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಕೈಗೊಂಡಿದೆ. ಜತೆಗೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ಮೇರೆಗೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಕಮಲ್ ಪಂತ್ ಮಂಗಳೂರಿನತ್ತ ದೌಡಾಯಿಸಿದ್ದಾರೆ.

ಮಂಗಳೂರು: ಯುವಕನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

ಕರಾವಳಿ ಜಿಲ್ಲೆಗಳಲ್ಲಿ ಪದೇ ಪದೇ ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗುತ್ತಿದ್ದು ಯಾವುದೇ ಕಾರಣಕ್ಕೂ ಶಾಂತಿಗೆ ಭಂಗ ಉಂಟಾಗಬಾರದು ಎಂದು ರೆಡ್ಡಿ ಖಡಕ್ ಆದೇಶ ನೀಡಿದ್ದಾರೆ.

Deepak murder: ADGP Kamal Pant rushed to Mangaluru

ಶಾಂತಿಭಂಗ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ, ರಾಜ್ಯ ಮೀಸಲು ಪೊಲೀಸ್ ಪಡೆ ತುಕಡಿಗಳನ್ನು ನಿಯೋಜಿಸಿ ಎಂದು ಅವರು ಪೊಲೀಸರಿಗೆ ಸೂಚಿಸಿದ್ದಾರೆ.

ದೀಪಕ್ ಕೊಲೆ ಪ್ರಕರಣ, ಸಿನಿಮೀಯ ರೀತಿಯಲ್ಲಿ 4 ಶಂಕಿತರ ಬಂಧನ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, "ಇಂತಹ ದೌರ್ಜನ್ಯವು ಅಮಾನವೀಯವಾಗಿದೆ. ಈ ಸಂದರ್ಭದಲ್ಲಿ ಇಸ್ಲಾಂ ಧರ್ಮವನ್ನು ಬಳಸುವುದು ಧರ್ಮಕ್ಕೆ ಮಾಡಿದ ಅಪಮಾನ. ಪೊಲೀಸರ ತನಿಖೆಯನ್ನು ಪ್ರಶಂಸಿಸಿ. ಕೋಮು ವಿರೋಧಿ ಅಜೆಂಡಾವನ್ನು ಬಳಸುವ ಪ್ರತಿಯೊಬ್ಬರ ಜತೆಗೂ ಕಬ್ಬಿಣದ ಕೈಯಿಂದ ವ್ಯವಹರಿಸಬೇಕು," ಎಂದು ಟ್ವೀಟ್ ಮಾಡಿದ್ದಾರೆ.

ಮಧ್ಯಾಹ್ನ ನಡೆದ ಕೊಲೆ

ದುಷ್ಕರ್ಮಿಗಳ ತಂಡವೊಂದು 32 ವರ್ಷದ ದೀಪಕ್ ರನ್ನು ಇಂದು ಮಧ್ಯಾಹ್ನ 1.30ರ ಸುಮಾರಿಗೆ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದೆ. ಕೊಲೆಯಾದ ದೀಪಕ್ ಡೊಕೊಮೊ ಮೊಬೈಲ್ ಕಂಪನಿಯಲ್ಲಿ ಕರೆನ್ಸಿ ಡಿಸ್ಟ್ರಿಬ್ಯೂಟರ್ ಆಗಿದ್ದರು.

ದೀಪಕ್ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡುವಂತೆ ಸಿಟಿ ರವಿ ಆಗ್ರಹ

ಸ್ಥಳೀಯ ಹಿಂದು ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ದೀಪಕ್ ಕಾಟಿಪಳ್ಳದಲ್ಲಿ ಬೈಕಿನಲ್ಲಿ ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ನಾಲ್ವರ ತಂಡ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
A tense situation has been created in Dakshina Kannada district following the assassination of Hindu organization activist Deepak Rao at Katipalla near Suratkal, Mangaluru. Now ADGP Kamal Pant rushed to Mangaluru.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ