ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಷೀರ್ ಹತ್ಯೆಯ ಸಿಸಿಟಿವಿ ದೃಶ್ಯಾವಳಿ ಸೋರಿಕೆ ವಿರುದ್ಧ ಕ್ರಮ: ಕಮಿಷನರ್

|
Google Oneindia Kannada News

ಮಂಗಳೂರು, ಜನವರಿ 13: ಕೊಟ್ಟಾರ ಚೌಕಿಯಲ್ಲಿ ನಡೆದ ಅಬ್ದುಲ್ ಬಷೀರ್ ಹತ್ಯೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಟಿ.ಆರ್ ಸುರೇಶ್ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಮಳನ್ನು ಉದ್ದೇಶಿಸಿ ಶುಕ್ರವಾರ ಮಾತನಾಡಿದ ಅವರು "ಅಹ್ಮದ್ ಬಷೀರ್ ಹತ್ಯೆ ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ತನಿಖೆಗಾಗಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಆದರೆ ಆ ದೃಶ್ಯಗಳು ಮಾಧ್ಯಮಕ್ಕೆ ಸೋರಿಕೆಯಾಗಿದೆ. ಈ ಬಗ್ಗೆ ಖಾಸಗಿ ಕಟ್ಟಡದ ಮಾಲೀಕರನ್ನು ವಿಚಾರಣೆ ನಡೆಸಲಾಗಿದೆ. ಅವರು ತಾನು ಯಾರಿಗೂ ಆ ದೃಶ್ಯಾವಳಿಗಳನ್ನು ನೀಡಿಲ್ಲ ಎನ್ನುತ್ತಿದ್ದಾರೆ. ಹಾಗಾದರೆ ಇಲಾಖೆಯ ಸಿಬ್ಬಂದಿ ಸೋರಿಕೆ ಮಾಡಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುವುದು. ತಪ್ಪು ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು," ಎಂದು ಅವರು ಸ್ಪಷ್ಟಪಡಿಸಿದರು.

ಬಶೀರ್‌ನನ್ನು ಕೊಲ್ಲಲು ಬಳಸಿದ ಮಾರಕಾಸ್ತ್ರಗಳಿಗಾಗಿ ಶೋಧಬಶೀರ್‌ನನ್ನು ಕೊಲ್ಲಲು ಬಳಸಿದ ಮಾರಕಾಸ್ತ್ರಗಳಿಗಾಗಿ ಶೋಧ

"ದೀಪಕ್ ರಾವ್ ಹತ್ಯೆ ಪ್ರಕರಣದಲ್ಲಿ ಬಂಧನ ಕಾರ್ಯಾಚರಣೆ ವೇಳೆ ಪೊಲೀಸ್ ಗುಂಡೇಟಿನಿಂದ ಗಾಯಗೊಂಡ ಇಬ್ಬರು ಆರೋಪಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ಆರೋಪಿಗಳಾದ ಪಿಂಕಿ ನವಾಜ್ ಮತ್ತು ರಿಜ್ವಾನ್ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಂಡು ತನಿಖೆ ನಡೆಸಲಾಗುವುದು," ಎಂದು ಅವರು ವಿವರ ನೀಡಿದರು.

Deepak Rao murder accused will be taken into police custody for investigation - T R Suresh

"ಈಗಾಗಲೇ ಬಂಧಿತ ಇಬ್ಬರು ಆರೋಪಿಗಳಾದ ನೌಷಾದ್ ಮತ್ತು ಮೊಹಮ್ಮದ್ ಇರ್ಷಾದ್ ಇವರನ್ನು ಒಂದು ವಾರ ಕಾಲ ಪೊಲೀಸ್ ಕಸ್ಟಡಿಯಲ್ಲಿ ತನಿಖೆ ನಡೆಸಲಾಗಿದೆ. ಪಿಂಕಿ ನವಾಜ್ ಹಾಗೂ ರಿಜ್ವಾನ್ ಅವರನ್ನು ಕಸ್ಟಡಿಗೆ ಪಡೆದು ತನಿಖೆ ನಡೆಸಲಾಗುವುದು," ಎಂದು ಅವರು ತಿಳಿಸಿದರು.

ನಗರದಲ್ಲಿ ಇತ್ತೀಚೆಗೆ ನಡೆದ ಅಹಿತಕರ ಘಟನೆಗಳ ಬಗ್ಗೆ ಆಳವಾದ ಸಮಗ್ರ ತನಿಖೆ ನಡೆಸಲಾಗುವುದು ಎಂದು ಹೇಳಿದ ಅವರು, "ಈ ಬಾರಿ ನಡೆದ ಘಟನೆಯನ್ನು ಕೇವಲ ತನಿಖೆ ನಡೆಸಿ, ಆರೋಪಿಗಳನ್ನು ಬಂಧಿಸಿದ ಮಾತ್ರಕ್ಕೆ ಸುಮ್ಮನಾಗುವುದಿಲ್ಲ. ಇಂತಹ ಘಟನೆಗಳು ಯಾಕಾಗಿ ನಡೆಯುತ್ತಿದೆ? ಇದನ್ನು ಯಾರೆಲ್ಲ ಬೆಂಬಲಿಸುತ್ತಾರೆ? ಎಂಬ ಬಗ್ಗೆ ವಿಸ್ತೃತ ತನಿಖೆ ನಡೆಸುತ್ತೇವೆ," ಎಂದು ಸ್ಪಷ್ಟಪಡಿಸಿದರು.

ನಗರದಲ್ಲಿ ನಡೆದ ದೀಪಕ್ ರಾವ್, ಅಬ್ದುಲ್ ಬಷೀರ್ ಕೊಲೆ ಪ್ರಕರಣ ಸೇರಿದಂತೆ ಮುದಸ್ಸಿರ್ ಕೊಲೆಯತ್ನ ಪ್ರಕರಣಗಳ ತನಿಖೆಯನ್ನು ಎಸಿಪಿ ಮಟ್ಟದ ಅಧಿಕಾರಿಗಳು ನಡೆಸುತ್ತಿದ್ದಾರೆ. ಇಂತಹ ಘಟನೆಗಳು ಮರುಕಳಿಸಬಾರದು. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಗೃಹ ಸಚಿವರು ಈಗಾಗಲೇ ಸೂಚನೆ ನೀಡಿದ್ದಾರೆ ಎಂದು ಟಿ.ಆರ್ ಸುರೇಶ್ ತಿಳಿಸಿದರು.

English summary
Two accused Pinky Nawaz and Rizwan in Deepak Rao murder case were recovering in hospital. They are also taken into police custody for investigation said Mangaluru Police Commissioner T R Suresh here in Mangaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X