ಮಂಗಳೂರು: ಪರಾರಿಯಾಗಲು ಯತ್ನಿಸಿದ ದೀಪಕ್ ಹಂತಕರ ಮೇಲೆ ಗುಂಡಿನ ದಾಳಿ

Posted By:
Subscribe to Oneindia Kannada

ಮಂಗಳೂರು, ಜನವರಿ 04: ಮಂಗಳೂರು ಹೊರವಲಯದ ಕಾಟಿಪಳ್ಳದಲ್ಲಿ ನಡೆದ ದೀಪಕ್ ರಾವ್ ಬರ್ಬರ ಹತ್ಯೆ ಪ್ರಕರಣ ಬಂಧಿತರನ್ನು ಪೊಲೀಸರು ಕರೆತರುವ ಸಂದರ್ಭದಲ್ಲಿ ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಆರೋಪಿಗಳು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ತಗುಲಿದೆ.

ಮಂಗಳೂರಲ್ಲಿ ದೀಪಕ್ ಹತ್ಯೆ: ಚಿತ್ರಗಳಲ್ಲಿ ಪ್ರಕ್ಷುಬ್ಧ ಕರಾವಳಿ

ಕಾಟಿಪಳ್ಳ ದಲ್ಲಿ ದೀಪಕ್ ರಾವ್ ಹತ್ಯೆ ನಡೆಸಿ ಕಾರಿನಲ್ಲಿ ಪರಾರಿಯಾಗುತ್ತಿದ್ದ ದುಷ್ಕರ್ಮಿಗಳನ್ನು ಸುರತ್ಕಲ್ ಹಾಗೂ ಮುಲ್ಕಿ ಠಾಣೆಯ ಪೊಲೀಸರ ತಂಡ ಬೆನ್ನಟ್ಟಿದ್ದರು. ಅತೀವೇಗದಿಂದ ಹೋಗುವ ವಾಹನದ ಬಗ್ಗೆ ಕಂಟ್ರೋಲ್ ರೂಮ್ ಗೆ ಮಾಹಿತಿ ದೊರೆತಿತ್ತು.

ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

ಕೂಡಲೇ ಕಿನ್ನಿಗೋಳಿಯಲ್ಲಿದ್ದ ಮುಲ್ಕಿ ಠಾಣೆಯ ಎಸ್.ಐ ಶೀತಲ್ ಅಲಗೂರು ಹಾಗು ಪೊಲೀಸ್ ಸಿಬ್ಬಂದಿ ಚಂದ್ರಶೇಖರ್ ವಾಹನದಲ್ಲಿ ಬೆನ್ನತ್ತಿದ್ದಾರೆ. ಪರಾರಿಯಾಗುತ್ತಿದ್ದ ದುಷ್ಕರ್ಮಿಗಳ ಸ್ವಿಫ್ಟ್ ಕಾರನ್ನ ಕಂಡ ಪೊಲೀಸರು ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿದ್ದಾರೆ.

Deepak Rao murder case: Mangaluru police shootout on accused

ದುಷ್ಕರ್ಮಿಗಳನ್ನು ತಡೆಯಲು ಪೊಲೀಸರು ಸೂಚನೆ ನೀಡಿದರೂ ದುಷ್ಕರ್ಮಿಗಳು ಕಾರು ನಿಲ್ಲಿಸದೇ ಪರಾರಿಯಾಗಲು ಯತ್ನಿಸಿದ್ದಾರೆ. ದುಷ್ಕರ್ಮಿಗಳು ಕಿನ್ನಿಗೋಳಿ ಸಮೀಪದ ಮೂರು ಕಾವೇರಿ, ಏಳಿಂಜೆ ಪಟ್ಟೆ ಕ್ರಾಸ್ , ಕಲ್ಲಮುಂಡ್ಕೂರು , ಗಂಜಿಮಠ, ಮಿಜಾರ್ ಮೂಲಕ ಪರಾರಿಯಾಗಲು ಯತ್ನಿಸುವಾಗ ಒಂದು ಹಂತದಲ್ಲಿ ದುಷ್ಕರ್ಮಿಗಳು ಪರಾರಿಯಾಗಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಮುಲ್ಕಿ ಠಾಣೆಯ ಸಬ್ ಇನ್ಸ್ ಪೆಕ್ಟರ್ ಶೀತಲ್ ಅಲಗೂರು ದುಷ್ಕರ್ಮಿಗಳ ಕಾರಿನ ಮೇಲೆ ಗುಂಡುಹಾರಿಸಿದ್ದಾರೆ.

ಮಂಗಳೂರು: ಯುವಕನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

ಈ ಸಂದರ್ಭದಲ್ಲಿ ಕಾರನ್ನು ನಿಲ್ಲಿಸಿ ಪರಾರಿಯಾಗಲು ಯತ್ನಿಸಿದ ನಾಲ್ವರು ದುಷ್ಕರ್ಮಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಕಾಟಿಪಳ್ಳ ನಿವಾಸಿ ಇರ್ಷಾದ್, ಕಿನ್ನಿಗೋಳಿ ನಿವಾಸಿ ನೌಷಾದ್, ಕಾಟಿಪಳ್ಳ ನಿವಾಸಿ ನವಾಜ್ ಯಾನೆ ಪಿಂಕಿ ನವಾಜ್ ಮತ್ತು ಕಾಟಿಪಳ್ಳ ನಿವಾಸಿ ರಿಜ್ವಾನ್ ಎಂದು ಗುರುತಿಸಲಾಗಿದೆ.

ದೀಪಕ್ ಹತ್ಯೆ: ಮಂಗಳೂರಿಗೆ ಎಡಿಜಿಪಿ ಕಮಲ್‌ ಪಂತ್ ದೌಡು, ಬಿಗಿ ಬಂದೋಬಸ್ತ್

ನಾಲ್ವರು ಆರೋಪಿಗಳ ಬಂಧಸಿ ಕರೆ ತರುವ ಸಂದರ್ಭದಲ್ಲಿ ಆರೋಪಿಗಳು ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪರಾರಿಯಾಗಲು ಯತ್ನಿಸಿದ ಆರೋಪಿಗಳನ್ನು ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪಣಂಬೂರು ಠಾಣೆಯ ಇನ್ಸ್ ಪೆಕ್ಟರ್ ರಷೀದ್ ಹಾಗು ಸಿಸಿಬಿ ಇನ್ಸ್ ಪೆಕ್ಟರ್ ಶಾಂತಾರಾಮ್ ಅವರು ಹಾರೀಸಿದ ಗುಂಡು ಇಬ್ಬರು ಆರೋಪಿಗಳ ಕಾಲಿಗೆ ತಗುಲಿದೆ.

ಆರೋಪಿಗಳಾದ ರಿಜ್ವಾನ್, ಪಿಂಕಿ ನವಾಜ್ ಕಾಲಿಗೆ ಗುಂಡು ತಗುಲಿದ್ದು ಗಾಯಗೊಂಡಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
A shootout took place after the killers of Deepak Rao in Mangaluru tried to escape from police. 2 accused are admitted to a private hospital in Mangaluru due to bullet injury. 32-year-old youth (Deepak) stabbed to death in Katipalla at Surathkal, Mangaluru district on January 3.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ