ಮನೆ ಕಟ್ಟಲು ಬಡವರ ಪರದಾಟ: ಎಗ್ಗಿಲ್ಲದೆ ಅಕ್ರಮ ಮರಳು ಮಾರಾಟ

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಸೆಪ್ಟೆಂಬರ್ 25: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳುಗಾರಿಕೆಗೆ ಅವಕಾಶ ನೀಡದ ಕಾರಣಕ್ಕೆ ಅಕ್ರಮ ಮರಳುಗಾರಿಕೆ ಮಿತಿ ಮೀರುತ್ತಿದೆ. ಮರಳು ಸಮಸ್ಯೆಯನ್ನು ಬಗೆಹರಿಸಲು ಒತ್ತಾಯಿಸಿ ಸೆ.27ರಂದು 12ಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮರಳು ಸಾಗಾಟ ಲಾರಿಗಳೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ ದಾಸ್ ತಿಳಿಸಿದ್ದಾರೆ.

ಕಟ್ಟಡ ನಿರ್ಮಿಸಲು ಜನರಿಗೆ ಮರಳು ಸಿಗುತ್ತಿಲ್ಲ. ಇದರಿಂದ ಬಡವರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಅತ್ತ ಮರಳು ಮಾಫಿಯಾದ ವಿರುದ್ಧ ಜಿಲ್ಲಾಡಳಿತ ಯಾವುದೇ ಕ್ರಮ ತೆಗೆದುಕೊಳ್ಳದೆ ಹೊರ ಜಿಲ್ಲೆಗಳಿಗೆ ಮರಳು ಸಾಗಾಟ ನಿರಂತರವಾಗಿ ನಡೆಯುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈಯವರು ಮರಳು ಸಮಸ್ಯೆ ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.[ದಕ್ಷಿಣ ಕನ್ನಡದಲ್ಲಿ ಮರಳು ಗಣಿಗಾರಿಕೆಗೆ ಅನುಮತಿ]

Demand to control sand mafia in Dakshina Kannada

ಜಿಲ್ಲಾದ್ಯಂತ ಸೃಷ್ಟಿಯಾಗಿರುವ ಮರಳು ಅಭಾವದ ವಿರುದ್ಧ ಮತ್ತು ಸಾಮಾಜಿಕ ನ್ಯಾಯದ ಆಧಾರದಲ್ಲಿ ಮರಳುಗಾರಿಕೆಗೆ ಅನುಮತಿ ನೀಡುವಂತೆ ಆಗ್ರಹಿಸಿ ಇದೇ ಸೆ.27ರಂದು 12ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಮಂಗಳೂರಿನಲ್ಲಿ 427 ಟಿಪಿ ಲೈಸನ್ಸ್ ಜಿಲ್ಲಾಧಿಕಾರಿ ಕಚೇರಿಯಿಂದ ಹಂಚಲಾಗಿದೆ. ಮರಳುಗಾರಿಕೆ ವಿಭಾಗದಲ್ಲಿ ಸೂಕ್ತ ಜ್ಞಾನ ಹೊಂದಿರುವವರು ಸುಮಾರು 80 ಟಿಪಿ ಹೋಲ್ದರ್ಸ್ ಮಾತ್ರ. ಉಳಿದ 344 ಲೈಸ್‌ನ್ಸ್ ಗಳು ಅಧಿಕೃತವಾಗಿ ಕೊಡಲಾಗಿದೆ ಎಂದು ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರಿಂಗ್‌ನ ಅಧ್ಯಕ್ಷ ವಿನಾಯಕ ಪೈ ಆರೋಪಿಸಿದ್ದಾರೆ.[ದಕ್ಷಿಣ ಕನ್ನಡದಿಂದ ಹೊರ ಜಿಲ್ಲೆಗೆ ಮರಳು ಸಾಗಿಸುವಂತಿಲ್ಲ]

ಸಿವಿಲ್ ಕಾಂಟ್ರಾಕ್ಟರ್ ಸಂಘದ ಅಧ್ಯಕ್ಷ ಪುರುಷೋತ್ತಮ ಕೊಟ್ಟಾರಿ, ಮಾಜಿ ಅಧ್ಯಕ್ಷ ವಿಜಯ ಮಯ್ಯ, ಸಾಂಪ್ರದಾಯಿಕ ಮರಳು ಉದ್ಯಮಿ ಸುನಿಲ್ , ಕರವೇ ಜಿಲ್ಲಾ ಉಪಾಧ್ಯಕ್ಷ ಮಧುಸೂದನ್ ಗೌಡ ಇದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Sand mafia should have to control in Dakshina Kannada demanded by Dakshina Kannada Karnataka Rakshana Vedike president Anil das in Mangaluru.
Please Wait while comments are loading...