ಮಂಗಳೂರು: ಮಿಲಾಗ್ರಿಸ್ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಧರಣಿ

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಅಕ್ಟೋಬರ್. 27 : ನಗರದ ಮಿಲಾಗ್ರಿಸ್ ಕಾಲೇಜಿನ ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳ ಮಧ್ಯೆ ತಿಕ್ಕಾಟಗಳು ಮುಂದುವರೆದಿವೆ. ಇತ್ತೀಚೆಗಷ್ಟೇ ಇದೇ ಕಾಲೇಜಿನ ಪಾಂಶುಪಾಲರ ಮೇಲೆ ಕೆಲ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದರು. ಆ ಕಾವು ಮಾಸುವ ಮುನ್ನವೇ ಕಾಲೇಜ್ ನಲ್ಲಿ ಗುರುವಾರ ಮತ್ತೊಂದು ಹೈಡ್ರಾಮ ನಡೆದಿದೆ.

ಮಿಲಾಗ್ರಿಸ್ ಕಾಲೇಜು ಸಂಸ್ಥೆ ಪರೀಕ್ಷೆ ಪ್ರವೇಶ ಪತ್ರವನ್ನು ನೀಡಲು ನಿರಾಕರಣೆ ಮಾಡಿರುವುದನ್ನು ವಿರೋಧಿ ವಿದ್ಯಾರ್ಥಿಗಳು ಗುರುವಾರ ಬೆಳಿಗ್ಗೆ ತರಗತಿಗಳನ್ನು ಬಹಿಷ್ಕರಿಸಿ ಪೋಷಕರೊಂದಿಗೆ ಕಾಲೇಜಿನ ಗೇಟ್ ಬಳಿ ಪ್ರತಿಭಟನೆ ನಡೆಸಿದರು.[ಮಂಗಳೂರು: ಮಿಲಾಗ್ರಿಸ್ ಕಾಲೇಜ್ ಪ್ರಿನ್ಸಿಪಾಲ್ ಮೇಲೆ ಹಲ್ಲೆ ನಡೆಸಿದವ ಅಂದರ್]

Denial of hall ticket, students satge protest against Milagres college principal

ಹಾಜರಾತಿ ಕೊರತೆ ಹಿನ್ನಲೆಯಲ್ಲಿ 22 ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದ ಎಲ್ಲ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ನೀಡಲಾಗಿದೆ. 22ಮಂದಿ ವಿದ್ಯಾರ್ಥಿಗಳ ಹಾಲ್ ಟಿಕೆಟ್ ಮಾತ್ರ ನಿರಾಕರಿಸಿದ್ದಾರೆ. ಮಾತ್ರವಲ್ಲದೆ ಅವರೆಲ್ಲರೂ ಒಂದೇ ಸಮುದಾಯದವರಾಗಿದ್ದಾರೆ ಎಂದು ಪೋಷಕರು ಆರೋಪಿಸಿದರು.

ಹಾಜರಾತಿ ಕೊರತೆಯಿಂದಾಗಿ ಸುಮಾರು 90 ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ನಿರಾಕರಣೆ ಮಾಡಿದ್ದರು ಎನ್ನಲಾಗಿದೆ. ನಂತರ 22 ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದ ಎಲ್ಲ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ನೀಡಲಾಗಿದೆಎಂದು ಪ್ರತಿಭಟನೆಕಾರರು ಕಾಲೇಜು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Denial of hall ticket, students satge protest against Milagres college principal

ಈ 22 ವಿದ್ಯಾರ್ಥಿಗಳ ಪೋಷಕರು ಕಾಲೇಜಿಗೆ ಬರಬೇಕೆಂದು ಕಾಲೇಜು ಸೂಚಿಸಿತ್ತು. ಅದರಂತೆ ಪೋಷಕರು ಒಂದು ವಾರದಿಂದ ಕಾಲೇಜಿಗೆ ಬರುತ್ತಿದ್ದರೂ ಪ್ರಾಂಶುಪಾಲರ ಭೇಟಿಗೆ ಅನುಮತಿ ನೀಡದಿರುವ ಹಿನ್ನಲೆಯಲ್ಲಿ ಈ ಪ್ರತಿಭಟನೆ ನಡೆಸಿದ್ದಾರೆ.

ವಿದ್ಯಾರ್ಥಿಗಳ ಪೋಷಕರು ನಡೆಸುತ್ತಿರುವ ಪ್ರತಿಭಟನೆಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಘಟನೆ ಸಾಥ್ ನೀಡಿತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The campus Front of India along with the students and their parents staged a protest against principal of Mailagres college who refused to give the exam hall tickets to 22 students, infront of milagres college here on October 27.
Please Wait while comments are loading...