ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೇಯೊ ಬೈದ್ಯೇತಿ ಮೂರ್ತಿ ಅವಮಾನ ಮಾಡಿದ್ದ ಯುವಕನ ಜಾಮೀನು ತಿರಸ್ಕಾರ

|
Google Oneindia Kannada News

ಮಂಗಳೂರು, ಅಕ್ಟೋಬರ್ 12: ತುಳುನಾಡಿನ ವೀರ ಪುರುಷರಾದ ಕೋಟಿ ಚೆನ್ನಯರ ತಾಯಿ ದೇಯಿ ಬೈದೇತಿ ಮೂರ್ತಿಗೆ ಅವಮಾನ ಮಾಡಿದ ಆರೋಪದಲ್ಲಿ ಪೊಲೀಸರಿಂದ ಬಂಧಿಸಲ್ಪಟ್ಟು ವ್ಯಕ್ತಿಯ ನ್ಯಾಯಾಂಗ ಬಂಧನ ಮುಂದುವರಿದಿದೆ. ಆರೋಪಿ ಜಾಮೀನು ಕೋರಿ ಸಲ್ಲಿಸಿದ ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ತಿರಸ್ಕರಿಸಿದೆ.

ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪುತ್ತೂರು ತಾಲೂಕಿನ ಈಶ್ವರಮಂಗಲ ನಿವಾಸಿ ಮಹ್ಮದ್ ಹನೀಫ್ ವಕೀಲರೊಬ್ಬರ ಮೂಲಕ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ರಾಮಚಂದ್ರ ಎಂ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಆದೇಶ ನೀಡಿದ್ದಾರೆ.

Desecration to deity Deyi Baidethi: Court rejects bail plea of Mohammad Hannif

ಪುತ್ತೂರಿನ ಪಡುಮಲೆಯಲ್ಲಿ ಅರಣ್ಯ ಇಲಾಖೆಯ ವತಿಯಿಂದ ದೇಯಿ ಬೈದೇತಿ ಹೆಸರಿನಲ್ಲಿ ಔಷಧ ವನ ನಿರ್ಮಾಣಗೊಂಡಿತ್ತು. ಆರೋಪಿಯು ಈ ಔಷಧಿ ಮನದೊಳಗಿರುವ ದೇಹಿ ಬೈದೇತಿಯ ಮೂರ್ತಿಯ ಪಕ್ಕದಲ್ಲಿ ಕುಳಿತು ಮೂರ್ತಿಯ ಎದೆಯ ಭಾಗವನ್ನು ಮುಟ್ಟಿ ಅಶ್ಲೀಲ ಭಂಗಿಯ ಭಾವಚಿತ್ರ ತೆಗೆದು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದ.

ಈ ಘಟನೆಗೆ ಸಂಬಂಧಿಸಿ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಕಾರ್ಯದರ್ಶಿ ಕೇಶವ ಪೂಜಾರಿ ಬೆದ್ರಾಳ ಅವರು ನೀಡಿದ ದೂರಿನಂತೆ ಸಂಪ್ಯ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದರು.

English summary
Puttur JMFC Court rejects bail plea of accussed Mohammad Hannif here on Oct 12. Mohammad Hannif was in jail after he taken his offensive picture with deity Deyi Baidethi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X