ಮಂಗಳೂರು ಪರಿಸ್ಥಿತಿಯ ಬಗ್ಗೆ ಆಂತರಿಕ ಸಭೆ ನಡೆಸಿದ ಡಿಜಿಪಿ ದತ್ತಾ

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಜುಲೈ 14 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ನೆಡೆಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಆರ್.ಕೆ. ದತ್ತಾ ಮಂಗಳೂರಿಗೆ ತೆರೆಳಿದ್ದಾರೆ.

ಡಿಜಿಪಿ ಆರ್.ಕೆ. ದತ್ತಾ ಮಂಗಳೂರಿನ ಪೊಲೀಸ್ ಕಮಿಷನರ್ ಕಚೇರಿಗೆ ಭೇಟಿ ನೀಡಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಜಿಲ್ಲೆಯ ಪರಿಸ್ಥಿತಿಯ ಬಗ್ಗೆ ಆಂತರಿಕ ಸಭೆ ನೆಡೆಸಿದರು.

DGP Rupak Kumar Dutta arrives in Mangaluru, holds prolonged consultations

ಈಗಾಗಲೇ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಮೋಹನ್ ಮಂಗಳೂರಿನಲ್ಲಿ ಮೊಕ್ಕಾಂ ಹೂಡಿದ್ದು, ಸಿಐಡಿ ವಿಭಾಗದ ಐಜಿಪಿ ಚಂದ್ರಶೇಖರ್ , ಇಂಟೆಲಿಜೆನ್ಸ್ ವಿಭಾಗದ ಐಜಿಪಿ ಅಮೃತ್ ಪಾಲ್ ಸೇರಿದಂತೆ ಹಿರಿಯ ಪೊಲೀಸ್ ಆಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

ಗಲಭೆ ಪೀಡಿತ ಬಂಟ್ವಾಳಕ್ಕೆ ಡಿಜಿಪಿ ದತ್ತಾ, ಕೆಂಪಯ್ಯ ಭೇಟಿ

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿರುವ ಖಡಕ್ ಅಧಿಕಾರಿಗಳೊಂದಿಗೆ ಚರ್ಚಿಸಿ ಅವರಿಂದ ಕಾನೂನು ಸುವ್ಯವಸ್ಥೆ ನೆಲೆಗೊಳಿಸಲು ಸಲಹೆ ಪಡೆಯಲಾಗಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಪ್ರತಿಯೊಂದು ಚಟುವಟಿಕೆಗಳ ಬಗ್ಗೆ ತೀವ್ರಾ ನಿಗಾ ಇರಿಸಲಾಗಿದೆ.

ಡಿಜಿಪಿ ಆರ್.ಕೆ.ದತ್ತಾ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಇಂದು ಗಲಭೆ ನಡೆದ ಬಂಟ್ವಾಳ,ಬಿ.ಸಿ.ರೋಡ್ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ.

ಅಲ್ಲಿಯೇ ಪೊಲೀಸ್ ಅಧಿಕಾರಿಗಳ ಸಭೆ ನಡೆಸಲಿರುವ ಆರ್ .ಕೆ. ದತ್ತಾ ಜಿಲ್ಲೆಯಲ್ಲಿ ಈ ವರೆಗೆ ನಡೆದಿರುವ ಅಹಿತಕರ ಘಟನೆ ಸೇರಿದಂತೆ ಆರ್ ಎಸ್ ಎಸ್ ಶರತ್ ಮಡಿವಾಳ ಸಾವಿನ ತನಿಖೆ ಪ್ರಗತಿಯ ಬಗ್ಗೆ ವಿಚಾರಣೆ ನಡೆಸಲಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
State director general of police (DGP), Rupak Kumar Dutta, arrived in the Mangaluru on Thursday July 13 to personally take stock of the law and order situation in Dakshina Kannada district in the light of some unsavoury incidents which happened here in the recent past. He held prolonged consultations with officials in key positions including city police commissioner.
Please Wait while comments are loading...