ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನ.18ರಿಂದ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

|
Google Oneindia Kannada News

ಮಂಗಳೂರು, ನ.7 : ಧರ್ಮಸ್ಥಳದಲ್ಲಿ ನ.18 ರಿಂದ 22ರವರೆಗೆ ಲಕ್ಷದೀಪೋತ್ಸವ ನಡೆಯಲಿದೆ. ಸರ್ವಧರ್ಮ ಸಮ್ಮೇಳನವನ್ನು ರಾಜ್ಯಪಾಲ ವಜುಭಾಯಿ ವಾಲಾ ಉದ್ಘಾಟಿಸಲಿದ್ದು, ಆದಿ ಚುಂಚನಗಿರಿಯ ನಿರ್ಮಲಾನಂದ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ತಿಕ ಮಾಸದ ಲಕ್ಷ ದೀಪೋತ್ಸದ ಅಂಗವಾಗಿ ನ.18ರಿಂದ 22ರ ವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಧರ್ಮಸ್ಥಳ ಪ್ರೌಢ ಶಾಲಾ ಆವರಣದಲ್ಲಿ ರಾಜ್ಯ ಮಟ್ಟದ ವಸ್ತು ಪ್ರದರ್ಶನವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ನ.18 ರಂದು ಉದ್ಘಾಟಿಸಲಿದ್ದಾರೆ. [ಧರ್ಮಸ್ಥಳದಲ್ಲಿ ಯಡಿಯೂರಪ್ಪ ಪ್ರಮಾಣ ಮಾಡಲಿ]

Dharmasthala

ನ.20ರಂದು ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಐಟಿ-ಬಿಟಿ ಸಚಿವ ಎಸ್‌.ಆರ್.ಪಾಟೀಲ್ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ. ಸಾಹಿತಿ ಸಿದ್ದಲಿಂಗ ಪಟ್ಟಣಶೆಟ್ಟಿ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದು, ಮೈಸೂರಿನ ನಿವೃತ್ತ ಪ್ರಾಧ್ಯಾಪಕ ಡಾ.ಪಿ.ಕೆ. ರಾಜಶೇಖರ್ ಮತ್ತು ಮೈಸೂರಿನ ಪೊಲೀಸ್ ಉಪ ನಿರ್ದೇಶಕಿ ಡಾ.ಧರಣಿದೇವಿ ಮಾಲಗುತ್ತಿ ಉಪನ್ಯಾಸ ನೀಡಲಿದ್ದಾರೆ.

ನ. 21 ರಂದು ಸರ್ವಧರ್ಮ ಸಮ್ಮೇಳನ ನಡೆಯಲಿದ್ದು, ರಾಜ್ಯಪಾಲ ವಜುಭಾಯಿ ವಾಲಾ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಆದಿಚುಂಚನಗಿರಿ ಕ್ಷೇತ್ರದ ಶ್ರೀ ನಿರ್ಮಲಾನಂದ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ.

ಸರ್ವಧರ್ಮ ಸಮ್ಮೇಳನದಲ್ಲಿ ಉಪನ್ಯಾಸಕರಾಗಿ ಮಂಗಳೂರಿನ ಸೈಂಟ್ ಜೋಸೆಫ್ ಸೆಮಿನರಿಯ ಆಧ್ಯಾತ್ಮಿಕ ನಿರ್ದೇಶಕ ಫಾ. ಕ್ಲಿಫರ್ಡ್ ಫೆರ್ನಾಂಡಿಸ್, ಬೆಂಗಳೂರಿನ ಮಹಾಬೋಧಿ ಸೊಸೈಟಿ ನಿರ್ದೇಶಕ ಡಾ. ಬಿ.ವಿ. ರಾಜಾರಾಮ್, ಸುಧಾ ವಾರಪತ್ರಿಕೆ ಸಹಾಯಕ ಸಂಪಾದಕ ಬಿ.ಎಂ. ಹನೀಫ್ ಭಾಗವಹಿಸಲಿದ್ದಾರೆ.

English summary
The annual Laksha Deepotsava celebrations will begin at Sri Kshetra Dharmasthala from November 18 to 22. A Sarva Dharma Sammelan and Sahitya Sammelan will also be organized.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X