ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೆಗ್ಗಡೆಯವರಿಗೆ 51ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ: ಅ.24ರಂದು ಶ್ರೀ ಕ್ಷೇತ್ರಕ್ಕೆ ಸಿಎಂ ಆಗಮನ

|
Google Oneindia Kannada News

ಮಂಗಳೂರು, ಅಕ್ಟೋಬರ್. 23: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ಪಟ್ಟಾಭಿಷೇಕವಾಗಿ ಈಗಾಗಲೇ 50 ವರ್ಷಗಳನ್ನು ಪೂರೈಸಿದ್ದಾರೆ. ಅವರ 51ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ನಾಳೆ ಬುಧವಾರ ಅಕ್ಟೋಬರ್ 24 ರಂದು ಶ್ರೀ ಕ್ಷೇತ್ರದಲ್ಲಿ ವಿಜೃಂಭಣೆಯಿಂದ ನಡೆಯಲಿದೆ.

ಪಟ್ಟಾಭಿಷೇಕ ವರ್ಧಂತ್ಯುತ್ಸವ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಸಿದ್ಧತೆ ಪೂರ್ಣಗೊಂಡಿದೆ. ಬುಧವಾರ ಸಂಜೆ ಕ್ಷೇತ್ರದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಭಾಗವಹಿಸಲಿದ್ದಾರೆ. ಅದಲ್ಲದೇ ವಿವಿಧ ಕ್ಷೇತ್ರದ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಅನಿತಾ ಕುಮಾರಸ್ವಾಮಿ ಧರ್ಮಸ್ಥಳಕ್ಕೆ ಭೇಟಿ: ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಕೆಅನಿತಾ ಕುಮಾರಸ್ವಾಮಿ ಧರ್ಮಸ್ಥಳಕ್ಕೆ ಭೇಟಿ: ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಕೆ

ಕುಮಾರಸ್ವಾಮಿ ಅವರು ಮುಂಜಾನೆ ಮಂಜುಷಾ ವಸ್ತು ಸಂಗ್ರಹಾಲಯವನ್ನು ಲೋಕಾರ್ಪಣೆಗೊಳಿಸಲಿದ್ದು, ಧರ್ಮಾಧಿಕಾರಿಯಾಗಿ 50 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಅಭಿನಂದಿಸಲಿದ್ದಾರೆ.

Dr. D Veerendra Heggade Pattabhisheka vardanthosthsava

ಈ ಸಂದರ್ಭದಲ್ಲಿ ಹೇಮಾವತಿ ಹೆಗ್ಗಡೆ ಅವರು ಸುವರ್ಣ ಸಂಚಯ ಪುಸ್ತಕ ಮಾಲಿಕೆಯನ್ನು ಬಿಡುಗಡೆಗೊಳಿಸಲಿದ್ದಾರೆ.

 ಪಟ್ಟಾಭಿಷೇಕದ ಸುವರ್ಣ ಸಂಭ್ರಮದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಹೆಗ್ಗಡೆ ಪಟ್ಟಾಭಿಷೇಕದ ಸುವರ್ಣ ಸಂಭ್ರಮದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಹೆಗ್ಗಡೆ

ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಆಗಮಿಸಲಿರುವ ಮುಖ್ಯಮಂತ್ರಿಗಳು ಶ್ರೀ ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೂ ಚಾಲನೆ ನೀಡಿಲಿದ್ದಾರೆ.

English summary
Dr. D Veerendra Heggade completed 50 years as Dharmadhikari Of Dharmasthala. 51th Pattabhisheka Vardanthosthava celebration on October 24 at Dharmasthala. CM Kumaraswamy will attend this program.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X