ಮಂಗಳೂರು ವಿಮಾನ ನಿಲ್ದಾಣದಲ್ಲಿ ಗಾಂಜಾ ಸಾಗಿಸುತ್ತಿದ್ದವ ಪರಾರಿ

Posted By:
Subscribe to Oneindia Kannada

ಮಂಗಳೂರು, ಸೆಪ್ಟೆಂಬರ್ 16: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗಾಂಜಾ ಸಾಗಾಟ ಪ್ರಕರಣದ ಆರೋಪಿಯೊಬ್ಬ ಕಸ್ಟಮ್ಸ್ ಅಧಿಕಾರಿಗಳಿಂದ ತಪ್ಪಿಸಿಕೊಂಡು ಪರಾರಿಯಾದ ಘಟನೆ ನಡೆದಿದೆ. ವಿದೇಶಕ್ಕೆ ಗಾಂಜಾ ಸಾಗಿಸುತ್ತಿದ್ದ ಕೇರಳದ ಕಾಸರಗೋಡಿನ ಮಹಮ್ಮದ್ ಹನೀಫ್ ಎಂಬುವನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.

ಮಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನ ಕೊಲೆ

ದೋಹಾಕ್ಕೆ ತೆರಳಲು ಶುಕ್ರವಾರ ಮಂಗಳೂರು ನಿಮಾನ ನಿಲ್ದಾಣಕ್ಕೆ ಬಂದಿದ್ದ ಮಹಮ್ಮದ್ ಹನೀಫ್ ನ ಬ್ಯಾಗ್ ತಪಾಸಣೆ ನಡೆಸಿದಾಗ 3 ಪ್ಯಾಕೆಟ್ ನಲ್ಲಿ ಗಾಂಜಾ ಪತ್ತೆಯಾಗಿತ್ತು. ಬಂಧಿತ ಹನೀಫ್ ಬ್ಯಾಗ್ ನಿಂದ 4.820 ಕಿಲೋ ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿತ್ತು.

Drug peddler escaped after arrested at Mangaluru international airport

ಆ ನಂತರ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿರುವ ಕಸ್ಟಮ್ಸ್ ಕಚೇರಿಯ ಕೊಠಡಿಯೊಂದರಲ್ಲಿ ವಿಚಾರಣೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಇನ್ನೊಂದು ವಿಮಾನ ಬಂದ ಕಾರಣ ಮಹಮ್ಮದ್ ಹನೀಫ್ ನನ್ನು ಕೊಠಡಿಯಲ್ಲಿ ಬಿಟ್ಟು, ಕರ್ತವ್ಯಕ್ಕೆ ತೆರಳಿದ್ದಾರೆ. ಈ ಸಂದರ್ಭವನ್ನು ಉಪಯೋಗಿಸಿದ ಹನೀಫ್ ಚಾಣಾಕ್ಷತನದಿಂದ ಪರಾರಿಯಾಗಿದ್ದಾನೆ.

ಹನೀಫ್ ಪರಾರಿಯಾಗುತ್ತಿರುವುದನ್ನು ವಿಮಾನ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿ ಗಮನಿಸಿ, ಸಿಐಎಸ್ ಎಫ್ ಭದ್ರತಾ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಆದರೆ ಕಸ್ಟಮ್ಸ್ ಅಧಿಕಾರಿಗಳು ಎಚ್ಚತ್ತುಕೊಳ್ಳುವಷ್ಟರಲ್ಲಿ ಹನೀಫ್ ಪರಾರಿ ಆಗಿದ್ದಾನೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
In a shocking incident a drug peddler who arrested by the Mangaluru customs officers has been escaped on September 15.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ