ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗುಡ್ಡ ಕುಸಿತ: ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತ

|
Google Oneindia Kannada News

ಮಂಗಳೂರು, ಆಗಸ್ಟ್ 14: ಕರಾವಳಿ ಸೇರಿದಂತೆ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕಳೆದ 5 ದಿನಗಳಿಂದ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಲ್ಲಿ ಗುಡ್ಡ ಕುಸಿದ ಘಟನೆಗಳು ಬೆಳಕಿಗೆ ಬಂದಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರು-ಮಂಗಳೂರು ರೈಲ್ವೇ ಸಂಪರ್ಕ ಕಡಿತಗೊಂಡಿದೆ.

ಸುಬ್ರಹ್ಮಣ್ಯದ ಅರೆಬೆಟ್ಟ ಬಳಿ ರೈಲ್ವೇ ಟ್ರ್ಯಾಕ್ ಮೇಲೆ ಗುಡ್ಡ ಕುಸಿದು ಬಿದ್ದಿದೆ. ಸುಬ್ರಹ್ಮಣ್ಯ ಸೆಕ್ಷನ್ ಕಿಮಿ 71 ಮತ್ತು 78ರಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಗುಡ್ಡ ಕುಸಿದು ರೈಲ್ವೇ ಟ್ರ್ಯಾಕ್ ಗೆ ಬಿದ್ದ ಪರಿಣಾಮ ಟ್ರ್ಯಾಕ್ ಹಾನಿ ಗೊಂಡಿದೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು - ಬೆಂಗಳೂರು ನಡುವೆ ರೈಲು ಸಂಚಾರ ರದ್ದುಗೊಳಿಸಲಾಗಿದೆ.

Due to heavy Rain landslide in western Ghat region

ಉತ್ತರ ಕನ್ನಡದಲ್ಲಿ ಮಳೆಗೆ ಕೊಚ್ಚಿ ಹೋದ ಸೇತುವೆ, ಸಂಚಾರ ಅಸ್ತವ್ಯಸ್ತ‌ಉತ್ತರ ಕನ್ನಡದಲ್ಲಿ ಮಳೆಗೆ ಕೊಚ್ಚಿ ಹೋದ ಸೇತುವೆ, ಸಂಚಾರ ಅಸ್ತವ್ಯಸ್ತ‌

ಈ ನಡುವೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ನಿರಂತರವಾಗಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ತುರ್ತು ಮುನ್ನೆಚ್ಚರಿಕೆ ಸಂದೇಶ ರವಾನಿಸಿದೆ .

Due to heavy Rain landslide in western Ghat region

ಮುಂದಿನ 24 ಗಂಟೆಗಳ ಕಾಲ ಕರಾವಳಿ ಪ್ರದೇಶದಲ್ಲಿ ಮೀನುಗಾರರು ಸಮುದ್ರ ಅಥವಾ ನದಿಗಳಲ್ಲಿ ಮೀನುಗಾರಿಕೆಗೆ ತೆರಳಬಾರದು ಎಂದು ಎಚ್ಚರಿಸಿದೆ.

English summary
Due to heavy Rain landslide in western Ghat region. Because of this Mangalurur - Bangaluru railway service partially canceled.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X