ಸಚಿವ ಕೆಜೆ ಜಾರ್ಜ್ ರಾಜೀನಾಮೆಗೆ ಎಬಿವಿಪಿ ಒತ್ತಾಯ

By: ಒನ್ ಇಂಡಿಯಾ ಪ್ರತಿನಿಧಿ
Subscribe to Oneindia Kannada

ಮಂಗಳೂರು, ಜುಲೈ 13 : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಡಿವೈಎಸ್‌ಪಿ ಎಂ.ಕೆ.ಗಣಪತಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದೆ.

ಮಂಗಳೂರಿನಲ್ಲಿ ಮಂಗಳವಾರ ಎಬಿವಿಪಿ ಬೃಹತ್ ಪ್ರತಿಭಟನೆ ನಡೆಸಿತು. ಜ್ಯೋತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ತನಕ ಮೆರವಣಿಗೆ ನಡೆದ ಜಾಥಾದಲ್ಲಿ ಪಾಲ್ಗೊಂಡಿದ್ದವರು, ದಕ್ಷ ಅಧಿಕಾರಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ['ಮುಖ್ಯಮಂತ್ರಿಗಳು ಕೇಳಿದರೆ ರಾಜೀನಾಮೆ ಕೊಡುವೆ']

abvp

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಎಬಿವಿಪಿ ವಿಭಾಗ ಸಹ ಸಂಚಾಲಕ ಚೇತನ್ ಪಡೀಲ್, 'ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ.ಜಾರ್ಜ್ ಅವರ ಹೆಸರನ್ನು ಉಲ್ಲೇಖಿಸಿದರೂ, ಸಿಎಂ ಸಿದ್ದರಾಮಯ್ಯ ಮಾತ್ರ ಸಚಿವರನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ. ತಕ್ಷಣವೇ ಅವರ ರಾಜೀನಾಮೆಯನ್ನು ಪಡೆದು ಕಾನೂನಿನ ಕ್ರಮ ಜರುಗಿಸಬೇಕೆಂದು' ಎಂದರು. [ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆ ಸಿಬಿಐಗೆ ಕೊಡಿ]

ಆತ್ಮಹತ್ಯೆ ಮಾಡಿಕೊಂಡ ಎಂ.ಕೆ. ಗಣಪತಿ ಅವರ ಪತ್ನಿ ಮತ್ತು ಪುತ್ರರು ನೀಡಿರುವ ದೂರುಗಳ ಆಧಾರದ ಮೇಲೆ ಸಚಿವರ ವಿರುದ್ಧ ಪ್ರಕರಣವನ್ನು ದಾಖಲಿಸಬೇಕು. ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು. [ಜಾರ್ಜ್ ವಿರುದ್ಧ FIR ದಾಖಲಿಸಿ : ಓದುಗರ ಒಕ್ಕೊರಲ ಕೂಗು]

protest

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The Mangaluru unit of Akhil Bharatiya Vidyarthi Parishad (ABVP) on July 12, 2016 staged protest against Karnataka government and demanded for resignation of minister K.J.George in DySP M.K. Ganapati suicide case.
Please Wait while comments are loading...