ಕರಾವಳಿ ಜಿಲ್ಲೆಗಳಲ್ಲಿ ಡಿ.1ರಂದು ಈದ್ ಮಿಲಾದ್ ಸಾರ್ವತ್ರಿಕ ರಜೆ

Posted By:
Subscribe to Oneindia Kannada

ಮಂಗಳೂರು, ನವೆಂಬರ್ 30 : ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಈದ್ ಮಿಲಾದ್ ಹಬ್ಬವನ್ನು ಡಿಸೆಂಬರ್ 1ರಂದು ಆಚರಿಸಲು ನಿರ್ಧರಿಸಲಾಗಿದೆ.

2017ನೇ ಸಾಲಿನ ಈದ್ ಮಿಲಾದ್ ಹಬ್ಬದ ಸಾರ್ವತ್ರಿಕ ರಜೆ ಬದಲಾವಣೆ

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಗಳಿಗೆ ಅನ್ವಯಿಸುವಂತೆ ನಾಳೆ ಅಂದರೆ ಡಿಸೆಂಬರ್ 1ರಂದು ರಜೆ ಘೋಷಿಸಿ ಆದೇಶ ಹೊರಡಿಸಿದೆ.

Eid Milad holiday for Dk and udupi district on December 1

ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನಾಳೆ (ಶುಕ್ರವಾರ) ಸರ್ಕಾರಿ ಕಚೇರಿ ಹಾಗೂ ಶಾಲಾ ಕಾಲೇಜುಗಳಿಗೆ ರಜೆ ಇರಲಿದೆ. ಉಳಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಡಿಸೆಂಬರ್ 2ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ಡಿಸೆಂಬರ್ 1 ರಂದು ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಗಳಿಗೆ ರಜೆ ಘೋಷಿಸುವಂತೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ರಾಜ್ಯ ಮುಖ್ಯ ಕಾರ್ಯದರ್ಶಿ ಅವರಿಗೆ ಮನವಿ ಸಲ್ಲಿಸಿದ್ದರು. ಹಿನ್ನೆಲೆಯಲ್ಲಿ ರಜೆ ನೀಡಲಾಗಿದೆ.

ಡಿಸೆಂಬರ್ 2ರಂದು ಎಂದಿನಂತೆ ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಿಸಲಿವೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
karnataka govt already declared a public holiday for Eid Milad un Nabhi on December 2, But Muslim in DK and Udupi district going celebrate Eid Milad un Nabhi on December 1. So Karnataka govt declared December 1 public holiday for DK and Udupi district .

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ