ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರಿನಲ್ಲಿ ನಕಲಿ ಅಂಕಪಟ್ಟಿ ಜಾಲ ಭೇದಿಸಿದ ಸಿಸಿಬಿ ಪೊಲೀಸರು

|
Google Oneindia Kannada News

ಮಂಗಳೂರು, ಮಾರ್ಚ್ 19: ಮಂಗಳೂರು ನಗರದಲ್ಲಿ ಕಾರ್ಯಚರಿಸುತ್ತಿದ್ದ ನಕಲಿ ಅಂಕಪಟ್ಟಿ ಜಾಲವನ್ನು ಭೇದಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ತೊಕ್ಕೊಟ್ಟು ಟಿ.ಸಿ. ರಸ್ತೆಯಲ್ಲಿರುವ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸೈನ್ಸ್ (MITS) ಎಂಬ ಹೆಸರಿನ ಸಂಸ್ಥೆಯಲ್ಲಿ ನಕಲಿ ಅಂಕಪಟ್ಟಿಯನ್ನು ತಯಾರಿಸಿ ಹಣಕ್ಕಾಗಿ ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ತೊಕ್ಕೊಟ್ಟು ನಿವಾಸಿಗಳಾದ ಅಸ್ಕಾನ್ ಶೇಖ್ (25) ಹಾಗೂ ಅಸ್ರಾರುದ್ದೀನ್ (26) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 2 ಮೊಬೈಲ್ ಫೋನ್ ಹಾಗು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮೂಡುಬಿದಿರೆ : ಆಳ್ವಾಸ್ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆಮೂಡುಬಿದಿರೆ : ಆಳ್ವಾಸ್ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ

ಇತ್ತೀಚೆಗೆ ನಗರ ತೊಕ್ಕೊಟ್ಟು ಟಿ. ಸಿ. ರಸ್ತೆಯಲ್ಲಿರುವ ಎಂಐಟಿಎಸ್ ಎಂಬ ಸಂಸ್ಥೆಯಲ್ಲಿ 10 ಸಾವಿರ ರೂಪಾಯಿಯಿಂದ 45ಸಾವಿರ ರೂಪಾಯಿಗೆ ನಕಲಿ ಅಂಕಪಟ್ಟಿ ಹಾಗೂ ಸರ್ಟಿಫಿಕೇಟ್ ಗಳನ್ನು ತಯಾರಿಸಿ ಮಾರಾಟ ಮಾಡಿ ವಂಚಿಸುತ್ತಿದ್ದ ಜಾಲದ ಬಗ್ಗೆ ಸಿಸಿಬಿ ಪೊಲೀಸರು ಮಾಹಿತಿ ಕಲೆ ಹಾಕಿ ದಾಳಿ ನಡೆಸಿದ್ದರು.

Fake certificate racket busted in Mangaluru

ಈ ಪ್ರಕರಣ ಪ್ರಮುಖ ಆರೋಪಿ ತೊಕ್ಕೊಟ್ಟು ನಿವಾಸಿ ಗೋಡ್ವಿನ್ ಡಿ ಸೋಜಾ ಎಂಬಾತನನ್ನು ಬಂಧಿಸಿದ್ದರು. ಆದರೆ ಗೋಡ್ವೀನ್ ಬಂಧನ ಆದ ಮಾಹಿತಿ ಪಡೆಯುತ್ತಿದ್ದಂತೆ ಇನ್ನಿಬ್ಬರು ಪ್ರಮುಖ ಆರೋಪಿಗಳಾದ ಅಸ್ಕಾನ್ ಶೇಖ್ ಹಾಗು ಅಸ್ರಾರುದ್ದೀನ್ ತಲೆಮರೆಸಿಕೊಂಡಿದ್ದರು.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಆರೋಪಿ ಅಸ್ಕಾನ್ ಶೇಖ್ ಎಂಐಟಿಎಸ್ ಸಂಸ್ಥೆಯನ್ನು ನಡೆಸುತ್ತಿದ್ದು, 2016 ರಿಂದ ಎಸ್ಎಸ್ಎಲ್ ಸಿ, ಪಿಯುಸಿ, ಡಿಗ್ರಿ, ಡಿಪ್ಲೋಮಾ ಹೀಗೆ ವಿವಿಧ ಪದವಿಯ ನಕಲಿ ಅಂಕಪಟ್ಟಿಗಳನ್ನು ತಯಾರಿಸಿ 10 ಸಾವಿರ ರೂಪಾಯಿಯಿಂದ 45 ಸಾವಿರ ರೂಪಾಯಿಗೆ ಮಾರಾಟ ಮಾಡುತ್ತಿದ್ದ ಎಂದು ಹೇಳಲಾಗಿದೆ.

ಆರೋಪಿಗಳು ಈವರೆಗೆ ಸಾವಿರಾರು ನಕಲಿ ಅಂಕಪಟ್ಟಿಗಳನ್ನು ತಯಾರಿಸಿ ಮಾರಾಟ ಮಾಡಿದ್ದಾರೆ ಎಂದು ಹೇಳಲಾಗಿದ್ದು ಈ ಕುರಿತು ತನಿಖೆ ಮುಂದುವರೆದಿದೆ.

English summary
Mangaluru CCB police busted fake certificate racket in Mangaluru. Recently CCB police raided MITS institution at T.C. road and arrested a person in connection with fake certificate racket. Now two more accused arrested in this case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X