ಉಳ್ಳಾಲ ಬಿಜೆಪಿ ಕಾರ್ಯಕರ್ತನ ಹತ್ಯೆ ಪ್ರಕರಣದಲ್ಲಿ ಐವರ ಬಂಧನ

Posted By:
Subscribe to Oneindia Kannada

ಮಂಗಳೂರು, ಅಕ್ಟೋಬರ್ 11: ಉಳ್ಳಾಲ ಬಿಜೆಪಿ ಕಾರ್ಯಕರ್ತ ಝುಬೈರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನೂ ಮೂವರು ಕೃತ್ಯದಲ್ಲಿ ಭಾಗಿಯಾಗಿದ್ದು ತಲೆ ಮರೆಸಿಕೊಂಡಿದ್ದಾರೆ.

ಅಕ್ಟೋಬರ್ 4 ರಂದು ಉಳ್ಳಾಲದ ಮುಕ್ಕಚ್ಚೇರಿಯಲ್ಲಿ ಬಿಜೆಪಿ ಕಾರ್ಯಕರ್ತ ಝುಬೈರ್ ಹತ್ಯೆ ನಡೆದಿತ್ತು.

Five arrested in Ullal BJP worker Zubair murder case

ಬಂಧಿತ ಆರೋಪಿಗಳನ್ನು ಸುಹೈಲ್, ನಿಜಾಮುದ್ದೀನ್, ಮಹಮ್ಮದ್ ಮುಸ್ತಫಾ, ತಾಜವುದ್ದೀನ್, ಆಸಿಫ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಕೊಲೆಗೆ ಬಳಸಿದ ಕಾರನ್ನು ವಶಕ್ಕೆ ಪಡೆಯಲಾಗಿದೆ.

"ಆರೋಪಿಗಳು ಝುಬೈರ್ ಮೇಲೆ ದ್ವೇಷ ಹೊಂದಿದ್ದರು. ಹಳೇ ವೈಷಮ್ಯದ ಹಿನ್ನಲೆಯಲ್ಲಿ ಅಕ್ಟೋಬರ್ 4ರಂದು ಆರೋಪಿಗಳು ಝುಬೈರ್ ರನ್ನು ಕೊಲೆ ಮಾಡಿದ್ದಾರೆ. ಪ್ರಕರಣದಲ್ಲಿ ಇನ್ನೂ ಮೂರು ಮಂದಿ ಆರೋಪಿಗಳು ಭಾಗಿಯಾಗಿದ್ದು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ," ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಟಿ.ಆರ್. ಸುರೇಶ್ ಹೇಳಿಕೆ ನೀಡಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Mangaluru City Police have arrested five persons in connection to the murder of Ullal BJP worker Zubair. Zubair was hacked to death on the night of October 4 at Mukkacheri in Ullal.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ