ಬಿಜೆಪಿ ಸೇರಿದ ಜನಾರ್ದನ ಪೂಜಾರಿ ಆಪ್ತ ಹರಿಕೃಷ್ಣ ಬಂಟ್ವಾಳ!

Posted By: Gururaj
Subscribe to Oneindia Kannada

ಮಂಗಳೂರು, ನವೆಂಬರ್ 12 : ಹಿರಿಯ ಕಾಂಗ್ರೆಸ್ ಮುಖಂಡ ಬಿ.ಜನಾರ್ದನ ಪೂಜಾರಿ ಅವರ ನಿಕಟವರ್ತಿ ಹರಿಕೃಷ್ಣ ಬಂಟ್ವಾಳ ಬಿಜೆಪಿ ಸೇರಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಅವರನ್ನು ಕೆಲವು ದಿನಗಳ ಹಿಂದೆ ಉಚ್ಛಾಟನೆ ಮಾಡಲಾಗಿತ್ತು.

ಮಂಗಳೂರಿನಲ್ಲಿ ಶನಿವಾರ ನಡೆದ ಬಿಜೆಪಿ ನವ ಕರ್ನಾಟಕ ಪರಿವರ್ತನಾ ಯಾತ್ರೆಯ ಸಮಾವೇಶದಲ್ಲಿ ಹರಿಕೃಷ್ಣ ಬಂಟ್ವಾಳ ಪಕ್ಷಕ್ಕೆ ಸೇರ್ಪಡೆಗೊಂಡರು. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಬಾವುಟ ನೀಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ತಾಕತ್ ಇದ್ದರೆ ಸುನ್ನತ್ ನಿಷೇಧ ಮಾಡಿ: ಸಿದ್ದುಗೆ ಈಶ್ವರಪ್ಪ ಸವಾಲ್

Former Congress leader Harikrishna Bantwal joins BJP

ಹರಿಕೃಷ್ಣ ಬಂಟ್ವಾಳ ಅವರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಲವು ದಿನಗಳಿಂದ ಹರಿದಾಡುತ್ತಿತ್ತು. ಕಳೆದ ನಾಲ್ಕು ದಶಕಗಳಿಂದ ದಕ್ಷಿಣ ಕನ್ನಡ ಕಾಂಗ್ರೆಸ್‌ನಲ್ಲಿ ಅವರು ಗುರುತಿಸಿಕೊಂಡಿದ್ದರು.

ಯಡಿಯೂರಪ್ಪ ವಿರುದ್ಧ ಕಿಡಿಕಾರಿದ ಸಚಿವ ರಮಾನಾಥ ರೈ

Former Congress leader Harikrishna Bantwal joins BJP

ಹರಿಕೃಷ್ಣ ಬಂಟ್ವಾಳ ಕರಾವಳಿ ಜಿಲ್ಲೆಯಲ್ಲಿ ನಿರ್ಣಾಯಕ ಸಮುದಾಯವಾಗಿರುವ ಬಿಲ್ಲವ ಸಮುದಾಯಕ್ಕೆ ಸೇರಿದವರು. ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆ ಸಂದರ್ಭದಲ್ಲಿ ಅವರು ಟಿಕೆಟ್ ವಂಚಿತರಾಗಿದ್ದರು. ಆದ್ದರಿಂದ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಚಿತ್ರಗಳು : ಸುಳ್ಯದಲ್ಲಿ ಕೇಸರಿ ಕಲರವ, ಪರಿವರ್ತನಾ ಯಾತ್ರೆಗೆ ಜನಸಾಗರ

ಈ ಹಿನ್ನಲೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಕಾರಣಕ್ಕೆ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿತ್ತು. ಆದ್ದರಿಂದ, ಅವರು ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Billava community leader, A close confidant of senior Congress leader B. Janardhana Poojary Harikrishna Bantwal joined BJP on November 11, 2017.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ