• search

ಸಚಿವ ಅಭಯಚಂದ್ರ ಜೈನ್‌ಗೆ ರವಿ ಪೂಜಾರಿಯಿಂದ ಬೆದರಿಕೆ ಕರೆ

By ಐಸಾಕ್ ರಿಚರ್ಡ್, ಮಂಗಳೂರು
Subscribe to Oneindia Kannada
For mangaluru Updates
Allow Notification
For Daily Alerts
Keep youself updated with latest
mangaluru News

  ಮಂಗಳೂರು, ಅಕ್ಟೋಬರ್ 26 : ಸಚಿವ ಅಭಯಚಂದ್ರ ಜೈನ್‌ ಅವರಿಗೆ ಭೂಗತ ಪಾತಕಿ ರವಿ ಪೂಜಾರಿ ಹೆಸರಿನಲ್ಲಿ ಜೀವ ಬೆದರಿಕೆ ಕರೆ ಬಂದಿದೆ. ಮೂಡುಬಿದಿರೆ ಪೊಲೀಸ್ ಠಾಣೆಗೆ ಈ ಕುರಿತು ದೂರು ನೀಡಲಾಗಿದೆ.

  ಯುವಜನ ಸೇವಾ ಮತ್ತು ಮೀನುಗಾರಿಕಾ ಸಚಿವ ಅಭಯಚಂದ್ರ ಜೈನ್ ಅವರಿಗೆ ಶನಿವಾರ ಮಧ್ಯಾಹ್ನ 12.45ರ ಸುಮಾರಿಗೆ ಬೇರೆ ದೇಶದ ನಂಬರ್‌ನಿಂದ ಜೀವ ಬೆದರಿಕೆ ಕರೆ ಬಂದಿದೆ. ಮಂಗಳೂರು ಪೊಲೀಸ್ ಆಯುಕ್ತ ಎಸ್.ಮುರುಗನ್ ಅವರಿಗೂ ಈ ಕುರಿತು ಮಾಹಿತಿ ರವಾನಿಸಲಾಗಿದೆ. [ಪ್ರಶಾಂತ್ ಪೂಜಾರಿ ಹತ್ಯೆಗೆ ಕಾರಣವೇನು?]

  abhayachandra jain

  ಶನಿವಾರ ಧರ್ಮಸ್ಥಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಈ ಕರೆ ಬಂದಿದೆ. ಕರೆ ಮಾಡಿದ ವ್ಯಕ್ತಿ ತನ್ನನ್ನು ರವಿ ಪೂಜಾರಿ ಎಂದು ಪರಿಚಯಿಸಿಕೊಂಡಿದ್ದಾನೆ. ಕಾರ್ಯಕ್ರಮ ಮುಗಿಸಿ ಬಂದ ಬಳಿಕ ಸಚಿವರು ಈ ಕುರಿತು ದೂರು ನೀಡಿದ್ದಾರೆ. [ಪೂಜಾರಿ ಹತ್ಯೆ : ನಾಲ್ವರ ಬಂಧನ]

  ‘ಭಜರಂಗ ದಳದ ಕಾರ್ಯಕರ್ತ ಪ್ರಶಾಂತ್ ಪೂಜಾರಿ ಕೊಲೆಯಲ್ಲಿ ನೀವು ನೇರವಾಗಿ ಭಾಗಿಯಾಗಿದ್ದೀರಿ. ನಿಮ್ಮನ್ನು ಕೊಲ್ಲದೆ ಬಿಡುವುದಿಲ್ಲ' ಎಂದು ಕರೆ ಮಾಡಿದ ವ್ಯಕ್ತಿ ಬೆದರಿಕೆ ಹಾಕಿದ್ದಾನೆ. ನಗರ ಪೊಲೀಸ್ ಆಯುಕ್ತ ಎಸ್.ಮುರುಗನ್ ಸಚಿವರ ಮನೆಗೆ ಭೇಟಿ ನೀಡಿ ಈ ಕರೆ ಕುರಿತು ಮಾತುಕತೆ ನಡೆಸಿದ್ದಾರೆ. ಸಚಿವರಿಗೆ ಪೊಲೀಸ್ ಬೆಂಗಾವಲಿನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. [ಮೂಡಬಿದಿರೆ : ಪ್ರಶಾಂತ್ ಪೂಜಾರಿ ಹತ್ಯೆ]

  ಮೂಡಬಿದಿರೆಯಲ್ಲಿ ಹೂವಿನ ವ್ಯಾಪಾರ ಮಾಡಿಕೊಂಡಿದ್ದ ಪ್ರಶಾಂತ್ ಪೂಜಾರಿ ಹಿಂದೂಪರ ಸಂಘಟನೆಯಲ್ಲಿ ಸಕ್ರಿಯನಾಗಿ ಗುರುತಿಸಿಕೊಂಡಿದ್ದ. ಅಕ್ಟೋಬರ್ 9ರಂದು ಮೂಡಬಿದಿರೆ ಪೇಟೆಯ ಸಮಾಜಮಂದಿರ ಗೇಟ್ ಬಳಿ ಅವರ ಹತ್ಯೆ ನಡೆದಿತ್ತು. ಇದುವರೆಗೂ 9 ಆರೋಪಿಗಳನ್ನು ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ.

  ಪ್ರಶಾಂತ್ ಹತ್ಯೆಯನ್ನು ಪ್ರತ್ಯಕ್ಷವಾಗಿ ನೋಡಿದ್ದ ವಾಮನ ಪೂಜಾರಿ ಅವರು ಅಕ್ಟೋಬರ್ 22ರಂದು ಸಾವನ್ನಪ್ಪಿದ್ದರು. ಇವರಿಗೂ ವಿದೇಶದಿಂದ ಬೆದರಿಕೆ ಕರೆಗಳು ಬರುತ್ತಿದ್ದವು ಎಂದು ಬಿಜೆಪಿ ಆರೋಪಿಸಿದೆ. ಆದರೆ, ಪೊಲೀಸರು ಇದು ಆತ್ಮಹತ್ಯೆ ಎಂದು ಹೇಳಿದ್ದಾರೆ.

  ಇನ್ನಷ್ಟು ಮಂಗಳೂರು ಸುದ್ದಿಗಳುView All

  ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

  English summary
  Minister for Fisheries and Youth and Sports, K Abhaya Chandra Jain received a death threat call from gangster Ravi Pujari on Saturday, October 24, 2015. Case registered in Moodbidri police station.

  Oneindia ಬ್ರೇಕಿಂಗ್ ನ್ಯೂಸ್,
  ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X
  We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more