ಮಂಗಳೂರು: ಗಾಂಜಾ ನಶೆಯಲ್ಲಿದ್ದ ಇಬ್ಬರ ಬಂಧನ

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಫೆಬ್ರವರಿ. 2 : ನಗರದ ಕೂಳೂರು ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ಗುರುವಾರ ಕಾವೂರು ಪೊಲೀಸರು ಬಂಧಿಸಿದ್ದಾರೆ.

ಬಿ.ಸಿ.ರೋಡ್ ಟೋಲ್ ಗೇಟ್‌ನಲ್ಲಿ ಕೆಲಸ ಮಾಡುವ ಕೋಡಿಕಲ್ ನಿವಾಸಿಗಳಾದ ಕಾರ್ತಿಕ್‌ರಾಜ್ (21) ಹಾಗೂ ನಗರದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಪೃಥ್ವಿ (20) ಬಂಧಿತ ಆರೋಪಿಗಳು.

Ganja Case, 2 youths Arrested by Mangaluru Kavoor police

ಗಾಂಜಾ ಸೇವನೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಕಾವೂರು ಠಾಣಾ ಪೊಲೀಸರು, ಕಾರ್ಯಾಚರಣೆ ನಡೆಸಿದ್ದಾರೆ. ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢಪಟ್ಟಿದೆ.

ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Kavoor police in Mangaluru have arrested two youths for consuming Ganja here on Wednesday February 2.
Please Wait while comments are loading...