ಪುತ್ತೂರು: ಕಾಲುವೆಗೆ ಉರುಳಿಬಿದ್ದ ಗ್ಯಾಸ್ ಟ್ಯಾಂಕರ್

Posted By: Prithviraj
Subscribe to Oneindia Kannada

ಪುತ್ತೂರು, ಅಕ್ಟೋಬರ್, 18: ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ನೀರಕಟ್ಟೆ ಸಮೀಪ ಖಾಲಿ ಗ್ಯಾಸ್ ಟ್ಯಾಂಕರೊಂದು ಮೋರಿಗೆ ಉರುಳಿ ಬಿದ್ದ ಘಟನೆ ಇಂದು ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರಣದಿಂದ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಗ್ಯಾಸ್ ಟ್ಯಾಂಕರ್ ಖಾಲಿ ಇದ್ದ ಕಾರಣದಿಂದ ಯಾವುದೇ ರೀತಿಯ ಪ್ರಾಣ ಹಾನಿ ಸಂಭವಿಸಿಲ್ಲ.

Gas tanker falls to river near Uppinangady

ಈ ಗ್ಯಾಸ್ ಟ್ಯಾಂಕರ್‌‌ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದಾಗ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದೆ.

ಟ್ಯಾಂಕರ್ ಚಾಲಕ ಹಾಗೂ ಕ್ಲೀನರ್ ಗೆ ಕಿರು ಗಾಯಗಳಾಗಿದ್ದು , ಪ್ರಾಣಾಪಾಯದಿಂದ ಪಾರಾಗಿದ್ದಾರೆ . ಈ ಟ್ಯಾಂಕರ್ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್)ಗೆ ಸೇರಿದೆ ಎಂದು ತಿಳಿದುಬಂದಿದೆ.

ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
An emptey gas tanker went out of control of its driver and fell in to the roadside gorge near Neerakatte on Tuesday putturu taluk.
Please Wait while comments are loading...