ಮಂಗಳೂರು : ಕುಮಾರಧಾರ ನದಿಗೆ ಬಿದ್ದ ಗ್ಯಾಸ್ ಟ್ಯಾಂಕರ್

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಆಗಸ್ಟ್ 09 : ಮಂಗಳೂರಿನಿಂದ ಬೆಂಗಳೂರಿಗೆ ಗ್ಯಾಸ್ ಸಾಗಣೆ ಮಾಡುತ್ತಿದ್ದ ಎಚ್‌ಪಿಸಿಎಲ್‌ ಕಂಪನಿಗೆ ಸೇರಿದ ಟ್ಯಾಂಕರ್ ಕುಮಾರಧಾರಾ ನದಿಗೆ ಬಿದ್ದಿದೆ. ಟ್ಯಾಂಕರ್‌ನಿಂದ ಭಾರೀ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗುತ್ತಿದ್ದು, ಆತಂಕ ಸೃಷ್ಟಿಯಾಗಿದೆ.

ಮಂಗಳವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಉಪ್ಪಿನಂಗಡಿ ಬಳಿಯ ಉದನೆ ನರ್ಸರಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ನದಿಗೆ ಉರುಳಿ ಬಿದ್ದಿದೆ. ಲಾರಿ ಸೇತುವೆಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಬ್ರೇಕ್ ಹಾಕಿದಾಗ ಟ್ಯಾಂಕರ್ ನದಿಗೆ ಉರುಳಿದೆ.[ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಏರಿಕೆ -ಇಳಿಕೆ]

Gas tanker falls into Kumaradhara River

ಕುಮಾರಧಾರಾ ನದಿಗೆ ಗ್ಯಾಸ್ ಸೋರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಕೆಲವು ಹೊತ್ತು ನದಿ ನೀರನ್ನು ಉಪಯೋಗಿಸಬಾರದು ಎಂದು ಪೊಲೀಸರು ಜನರಿಗೆ ಮನವಿ ಮಾಡಿದ್ದಾರೆ. ಟ್ಯಾಂಕರ್ ಉರುಳಿ ಬಿದ್ದ ಸ್ಥಳದ ಸಮೀಪ ಸರ್ಕಾರಿ ಶಾಲೆ ಇದ್ದು, ಜನರು ಆತಂಕಗೊಂಡಿದ್ದಾರೆ.[ನಗರದ ಬಡ ಕುಟುಂಬಗಳಿಗೆ ಹೆಚ್ಚುವರಿ ಸಿಲಿಂಡರ್]

ಮಂಗಳೂರು, ಪುತ್ತೂರಿನ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಟ್ಯಾಂಕರ್ ಮೇಲೆತ್ತುವ ಕಾರ್ಯಾಚರಣೆ ಆರಂಭಿಸಿದ್ದಾರೆ. ಪುತ್ತೂರು ಎಎಸ್ಪಿ ಸಿ.ಬಿ. ರಿಷ್ಯಂತ್ ಸ್ಥಳಕ್ಕೆ ಧಾವಿಸಿದ್ದಾರೆ.[ಚಿತ್ರಗಳು : ಮಂಗಳೂರಿನಲ್ಲಿ ಟ್ಯಾಂಕರ್ ಪಲ್ಟಿ, ಹೆದ್ದಾರಿ ಬಂದ್]

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
A tanker carrying gas belonging to HPCL company fell into Kumaradhara River at around 3 pm on Tuesday, August 9 at Udane, Shiradi village near Uppinangadi.
Please Wait while comments are loading...