ಉಚಿತ ಎಲ್ಪಿಜಿ-ಸಿಎಂ ಅನಿಲ ಭಾಗ್ಯ ಘೋಷಿಸಿದ ಖಾದರ್

Posted By:
Subscribe to Oneindia Kannada

ಮಂಗಳೂರು, ಜುಲೈ 27: ಅಡುಗೆ ಅನಿಲ ಸಂಪರ್ಕ ಹೊಂದಿರದ ರಾಜ್ಯದಲ್ಲಿರುವ ಲಕ್ಷಾಂತರ ಮಂದಿಗೆ ಶುಭ ಸುದ್ದಿ ಕಾದಿದೆ.

ರಾಜ್ಯದಲ್ಲಿನ ಅಡುಗೆ ಅನಿಲ ರಹಿತರೆಲ್ಲರಿಗೂ 'ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯಡಿ ಉಚಿತ ಅಡುಗೆ ಅನಿಲ ಸಂಪರ್ಕ ಕಲ್ಪಿಸಲಾಗುವುದು ಎಂದು ಸಚಿವ ಯು.ಟಿ ಖಾದರ್ ಅವರು ಗುರುವಾರದಂದು ಘೋಷಿಸಿದ್ದಾರೆ.

ಪ್ರಧಾನ ಮಂತ್ರಿ "ಉಜ್ವಲ" ಯೋಜನೆ ಎಂದರೇನು?

ಸರ್ಕ್ಯೂಟ್ ಹೌಸ್‌ನಲ್ಲಿ ಕರೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಯೋಜನೆಯಫಲಾನುಭವಿಗಳಿಗೆ 1940 ರೂ. ಬೆಲೆಯ ಅಡುಗೆ ಅನಿಲ ಸಂಪರ್ಕದೊಂದಿಗೆ 999 ರೂ. ವೌಲ್ಯದ 2 ಬರ್ನರ್ ಗ್ಯಾಸ್ ಸ್ಟ್ವವ್ ಉಚಿತವಾಗಿ ನೀಡಲಾಗುವುದು.
ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿ ಹೊಂದಿದ ಕುಟುಂಬದ ಮಹಿಳೆಯು ತನ್ನ ಹೆಸರಿನಲ್ಲಿ ಈ ಯೋಜನೆಯನ್ನು ಪಡೆದುಕೊಳ್ಳಬಹುದು ಎಂದರು.

Govt to announce Free LPG connections, gas stoves under Anila Bhagya - Khader

18 ವರ್ಷದ ಮೇಲ್ಪಟ್ಟ ಮಹಿಳಾ ಸದಸ್ಯರು (ಮಹಿಳೆಯರಿಲ್ಲದಿದ್ದರೆ 18 ವರ್ಷ ಮೇಲ್ಪಟ್ಟ ಪುರುಷರು) ತಮ್ಮ ಮನೆಯ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಸಂಖ್ಯೆಯೊಂದಿಗೆ ಖಾಸಗಿ ಫ್ರಾಂಚೈಸಿ ಕೇಂದ್ರ, ತಾಲೂಕು ಕಚೇರಿ, ಗ್ರಾಮ ಪಂಚಾಯತ್ ಕಚೇರಿ, ಜನಸ್ನೇಹಿ ಕೇಂದ್ರ, ಬೆಂಗಳೂರು ಒನ್/ ಕರ್ನಾಟಕ ಒನ್ ಕೇಂದ್ರಗಳಲ್ಲಿ 20 ರೂ. ಪಾವತಿಸಿ ಅರ್ಜಿ ಸಲ್ಲಿಸಬಹುದು. ಪರಿಶೀಲನೆಯ ಬಳಿಕ 15 ದಿನದೊಳಗೆ ಅಡುಗೆ ಅನಿಲ ಸಂಪರ್ಕ ಕಲ್ಪಿಸಲಾಗುವುದು ಎಂದರು.

ಜಿಎಸ್ಟಿ ನಂತರ ಅಡುಗೆ ಅನಿಲ ಸಿಲಿಂಡರ್ ದರ ಏರಿಕೆ

ಕೇಂದ್ರ ಸರಕಾರದ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಿದವರೂ ಮುಖ್ಯಮಂತ್ರಿಗಳ ಅಡುಗೆ ಅನಿಲ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಆದರೆ, ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಮತ್ತೆ ಇಲ್ಲಿ ಅವಕಾಶವಿಲ್ಲ. ಕೇಂದ್ರ ಸರಕಾರ ಎಲ್ಲರಿಗೂ ಈ ಯೋಜನೆಯ ಪ್ರಯೋಜನ ಕಲ್ಪಿಸಿದ್ದರೆ ರಾಜ್ಯ ಸರಕಾರ ಮತ್ತೆ ಮುಖ್ಯಮಂತ್ರಿಗಳ ಅಡುಗೆ ಅನಿಲ ಯೋಜನೆ ಜಾರಿಗೊಳಿಸುವ ಆವಶ್ಯಕೆಯಿರಲಿಲ್ಲ ಎಂದು ಹೇಳಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Siddaramaiah government is all set to distribute free LPG connections to the beneficiaries under the scheme 'Mukya Mantri Anila Bhagya Yojane', and along with LPG connections, the beneficiaries will also get double burner gas stoves, announced minister for food and civil supplies U T Khader.
Please Wait while comments are loading...